ಬೆಂಗಳೂರು : 2024 ಅಕ್ಟೋಬರ್-27 ರಂದು KEA ನಡೆಸಿದ 1,000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಜಿಲ್ಲಾವಾರು ತಾತ್ಕಾಲಿಕ ಅಂಕಪಟ್ಟಿ (Provisional Score List) ಯನ್ನು KEA ಇದೀಗ ಈ ಕೆಳಗಿನ ಲಿಂಕ್ ನಲ್ಲಿ ಪ್ರಕಟಿಸಿದೆ. ಆಕ್ಷೇಪಣೆಗಳಿದ್ದರೆ ನವೆಂಬರ್-28 ರೊಳಗಾಗಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಕಂದಾಯ ಇಲಾಖೆಯಲ್ಲಿನ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ, ದಿನಾಂಕ 27.10.2024 ರಂದು ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯ ಪತ್ರಿಕೆ-1 ಮತ್ತು ಪತ್ರಿಕೆ-2ರ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಮಾಹಿತಿಗಾಗಿ ಪ್ರಕಟಿಸಿ, ದಿನಾಂಕ 04.11.2024 ರ ವರೆಗೆ ಆಕ್ಷೇಪಣೆಗಳಿದ್ದಲ್ಲಿ ಪೂರಕ ದಾಖಲೆಗಳೊಂದಿಗೆ ಪ್ರಾಧಿಕಾರಕ್ಕೆ ಸಲ್ಲಿಸುವಂತೆ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿತ್ತು.
ದಿನಾಂಕ 04.11.2024 ರ ವರೆಗೆ ಸ್ವೀಕೃತವಾದ ಆಕ್ಷೇಪಣೆಗಳನ್ನು ವಿಷಯ ತಜ್ಞರ ಸಮಿತಿಯ ಮೂಲಕ ಪರಿಶೀಲಿಸಿ, ವಿಷಯ ತಜ್ಞರ ಶಿಫಾರಸ್ಸಿನಂತೆ ಅಂತಿಮ ಕೀ ಉತ್ತರಗಳನ್ನು ಹಾಗೂ ತಾತ್ಕಾಲಿಕ ಅಂಕಪಟ್ಟಿಯನ್ನು ದಿನಾಂಕ 27.11.2024 ರಂದು ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದ್ದು, ತಾತ್ಕಾಲಿಕ ಅಂಕಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ 28,11.2024 ಸಂಜೆ 4.00 ರೊಳಗೆ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಒದಗಿಸಲಾದ ಲಿಂಕ್ ಮೂಲಕ ಆಕ್ಷೇಪಣೆಯನ್ನು ಸಲ್ಲಿಸುವಂತೆ ಈ ಮೂಲಕ ತಿಳಿಸಿದೆ.
ತಾತ್ಕಾಲಿಕ ಅಂಕಗಳ ಹೊರತುಪಡಿಸಿ ಸಲ್ಲಿಸಲಾಗುವ ಆಕ್ಷೇಪಣೆಗಳನ್ನು ಮತ್ತು ಪೂರಕ ದಾಖಲೆಗಳಿಲ್ಲದ ಆಕ್ಷೇಪಣೆಗಳನ್ನು ಪುರಸ್ಕರಿಸಲಾಗುವುದಿಲ್ಲ.