ಬೆಂಗಳೂರು : ಬೆಂಗಳೂರಿನ ಪರಪ್ಪನ ಅಗ್ರಹಾರದಲ್ ಜೈಲಲ್ಲಿ ಅಕ್ರಮ ಚಟುವಟಿಕೆ ಕಾನೂನುಬಾಹಿರ ಚಟುವಟಿಕೆ ವಿಡಿಯೋಗಳು ವೈರಲ್ ಆಗಿರುವ ಕುರಿತಂತೆ ಇಂದು ಕಾರಾಗೃಹ ಕಚೇರಿಯಲ್ಲಿ ಅಧಿಕಾರಿಗಳ ಜೊತೆಗೆ ಸಚಿವ ಜಿ ಪರಮೇಶ್ವರ್ ಸಭೆ ನಡೆಸಿದರು. ಸಭೆಯ ಬಳಿಕ ಪರಮೇಶ್ವರ್ ಅವರು ಸುದ್ದಿಗೋಷ್ಠಿ ನಡೆಸಿದರು.
ಸುದ್ದಿಗೋಷ್ಠಿಯಲ್ಲಿ ಕೆಲ ಕಾನೂನು ಬಾಹಿರ ಚಟುವಟಿಕೆ ಆಗಿದೆ ಎಂದು ಪ್ರಸಾರ ಆಗಿದೆ. ಮಾಧ್ಯಮದಲ್ಲಿ ಪ್ರಸಾರ ಆಗಿರುವಂತಹ ವಿಡಿಯೋಗಳ ಬಗ್ಗೆ ಪರಿಶೀಲನೆ ನಡೆಸಿದ್ದೇವೆ. ಮುಖ್ಯವಾದ ಕೆಲವು ವಿಡಿಯೋಗಳು 2023 ರಲ್ಲಿ ಆಗಿರುವುದು ಬೆಳಕಿಗೆ ಬಂದಿದೆ. ಒಂದೆರಡು ವಿಡಿಯೋಗಳು ಮಾತ್ರ 3-4 ತಿಂಗಳ ಹಿಂದೆ ಆಗಿವೆ. ಈ ಎಲ್ಲ ವಿಡಿಯೋಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ವಿಡಿಯೋಗಳು ತನಿಖೆಗೆ ಸಮಿತಿ ರಚನೆ ಮಾಡಿದ್ದೇವೆ.








