ಮುಂಬೈ : ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಜನವರಿ 22ರಂದು ನಡೆಯಲಿರುವ ರಾಮ ಮಂದಿರ ನಿರ್ಮಾಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಅವರ ಪತ್ನಿ ಅನುಷ್ಕಾ ಶರ್ಮಾಗೆ ಆಹ್ವಾನ ನೀಡಲಾಗಿದೆ. ಸಮಾರಂಭಕ್ಕೆ ಆಹ್ವಾನಿಸಲ್ಪಟ್ಟ ಇತ್ತೀಚಿನ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ.
ಅಯೋಧ್ಯೆಯ ಭವ್ಯ ರಾಮ ಮಂದಿರದಲ್ಲಿ ನಡೆಯಲಿರುವ ಸಮಾರಂಭಕ್ಕೆ ಕೊಹ್ಲಿ ಜೊತೆಗೆ ವಿಶ್ವಕಪ್ ವಿಜೇತ ಭಾರತದ ಮಾಜಿ ನಾಯಕ ಎಂಎಸ್ ಧೋನಿ ಮತ್ತು ಭಾರತದ ಸಾರ್ವಕಾಲಿಕ ಶ್ರೇಷ್ಠ ಸಚಿನ್ ತೆಂಡೂಲ್ಕರ್ ಅವರನ್ನ ಆಹ್ವಾನಿಸಲಾಗಿದೆ.
ಇವರಲ್ಲದೇ ಅಕ್ಷಯ್ ಕುಮಾರ್, ಕಂಗನಾ ರನೌತ್, ಟೈಗರ್ ಶ್ರಾಫ್, ಜಾಕಿ ಶ್ರಾಫ್, ಹರಿಹರನ್, ರಜನಿಕಾಂತ್, ಅಮಿತಾಬ್ ಬಚ್ಚನ್, ರಣಬೀರ್ ಕಪೂರ್, ಆಲಿಯಾ ಭಟ್ ಮತ್ತು ರಣದೀಪ್ ಹೂಡಾ ಸೇರಿದಂತೆ ಹಲವಾರು ಬಾಲಿವುಡ್ ಸೆಲೆಬ್ರಿಟಿಗಳಿಗೆ ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರ ‘ಪ್ರಾಣ ಪ್ರತಿಷ್ಠಾ’ ಸಮಾರಂಭಕ್ಕೆ ಆಹ್ವಾನ ನೀಡಲಾಗಿದೆ.
‘#Shriramhomecoming’ ಬಳಸಿ ವೀಡಿಯೋಗಳನ್ನ ರಚಿಸಿ’ : ಭಕ್ತರಿಗೆ ‘ರಾಮ ಮಂದಿರ ಟ್ರಸ್ಟ್’ ಮನವಿ
BREAKING : ‘IBPS SO ಪ್ರಿಲಿಮಿನರಿ ಪರೀಕ್ಷೆ’ ಫಲಿತಾಂಶ ಬಿಡುಗಡೆ ; ಈ ರೀತಿ ಚೆಕ್ ಮಾಡಿ
BREAKING : ಕುನೋ ಪಾರ್ಕ್’ನಲ್ಲಿ ಮತ್ತೊಂದು ನಮೀಬಿಯಾ ‘ಚೀತಾ’ ಸಾವು, ಒಂದು ವರ್ಷದಲ್ಲಿ 10ನೇ ಸಾವು