Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಮೆರಿಕ-ಇರಾನ್ ನಡುವೆ ‘ರೇಸ್’: ಪತನಗೊಂಡ ಯುದ್ಧ ವಿಮಾನದ ಪೈಲಟ್ ಪತ್ತೆಗೆ ಜಾಲ; ಇರಾನ್‌ನಿಂದ ಭಾರಿ ಬಹುಮಾನ ಘೋಷಣೆ!

05/04/2026 6:14 AM

ಸಂಧ್ಯಾಕಾಲದ ಬದುಕಿಗೆ ಪೊಲೀಸ್ ಇಲಾಖೆಯ ‘ಆಸರೆ’: ಕರ್ನಾಟಕದ 20,000 ಮನೆಗಳಲ್ಲಿ ಒಂಟಿ ವೃದ್ಧರ ವಾಸ!

05/04/2026 6:13 AM

ವಿದ್ಯಾರ್ಥಿಗಳೇ ಗಮನಿಸಿ : ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಏಪ್ರಿಲ್ 7 ಅಥವಾ 8ಕ್ಕೆ ಪ್ರಕಟ | Karnataka PUC Result

05/04/2026 6:08 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ‘ವಕ್ಫ್’ ಆಸ್ತಿ ಕಬಳಿಕೆ ಬಗ್ಗೆ ಬಾಯಿ ಬಿಡದಂತೆ, 150 ಕೋಟಿ ಆಮಿಷ ಒಡ್ಡಿದ್ದ ವಿಜಯೇಂದ್ರ : CM ಸಿದ್ದರಾಮಯ್ಯ ಹೊಸ ಬಾಂಬ್!
KARNATAKA

BREAKING : ‘ವಕ್ಫ್’ ಆಸ್ತಿ ಕಬಳಿಕೆ ಬಗ್ಗೆ ಬಾಯಿ ಬಿಡದಂತೆ, 150 ಕೋಟಿ ಆಮಿಷ ಒಡ್ಡಿದ್ದ ವಿಜಯೇಂದ್ರ : CM ಸಿದ್ದರಾಮಯ್ಯ ಹೊಸ ಬಾಂಬ್!

By kannadanewsnow0515/12/2024 5:02 AM

ಬೆಂಗಳೂರು : ವಕ್ಪ್ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು ಬಿ .ವೈ ವಿಜಯೇಂದ್ರ ಅವರು ತಮಗೆ 150 ಕೋಟಿ ರೂಪಾಯಿ ಆಮಿಷವೊಡ್ಡಿದ್ದರು ಎಂದು ಬಿಜೆಪಿ ಸರ್ಕಾರದಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ನೇರವಾಗಿ ಪತ್ರ ಬರೆದಿರುವುದು ಬಯಲಾಗಿದೆ. ಪ್ರಧಾನಮಂತ್ರಿಯವರು ಈ ಆರೋಪವನ್ನು ಗಂಭೀರವಾಗಿ ಸ್ವೀಕರಿಸಿ ತಕ್ಷಣ ಸಿಬಿಐ ತನಿಖೆಗೆ ಆದೇಶಿಸಬೇಕೆಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ, ವಕ್ಪ್ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು BY ವಿಜಯೇಂದ್ರ ಅವರು ತಮಗೆ 150 ಕೋಟಿ ರೂಪಾಯಿ ಆಮಿಷವೊಡ್ಡಿದ್ದರು ಎಂದು ಬಿಜೆಪಿ ಸರ್ಕಾರದಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಅವರು ಪ್ರಧಾನಿ ನರೇಂದ್ರಮೋದಿ ಅವರಿಗೆ ನೇರವಾಗಿ ಪತ್ರ ಬರೆದಿರುವುದು ಬಯಲಾಗಿದೆ. ಪ್ರಧಾನಮಂತ್ರಿಯವರು ಈ ಆರೋಪವನ್ನು ಗಂಭೀರವಾಗಿ ಸ್ವೀಕರಿಸಿ ತಕ್ಷಣ ಸಿಬಿಐ ತನಿಖೆಗೆ ಆದೇಶಿಸಬೇಕೆಂದು ಆಗ್ರಹಿಸುತ್ತಿದ್ದೇನೆ.

‘’ಸನ್ಮಾನ್ಯ ಬಿ.ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ವಿಜಯೇಂದ್ರ ನಮ್ಮ ಮನೆಗೆ ಬಂದು ವಕ್ಪ್ ಆಸ್ತಿ ಕಬಳಿಕೆಯ ತನಿಖೆ ನಡೆಸಿ ನೀಡಿರುವ ವರದಿ ಬಗ್ಗೆ ಮೌನವಹಿಸುವಂತೆ ಕೇಳಿಕೊಂಡಿದ್ದು ಮಾತ್ರವಲ್ಲ ಇದಕ್ಕಾಗಿ 150 ಕೋಟಿ ರೂಪಾಯಿಗಳ ಆಮಿಷವೊಡ್ಡಿದ್ದರು. ನಾನು ಅವರಿಗೆ ಗದರಿಸಿ ಮನೆಯಿಂದ ಓಡಿಸಿದ್ದೆ. ಅದರ ನಂತರ ಈ ಎಲ್ಲ ಘಟನೆಗಳನ್ನು ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದಿದ್ದೆ’’ ಎಂದು ಸಾಕ್ಷಾತ್ ಅನ್ವರ್ ಮಾಣಿಪ್ಪಾಡಿಯವರೇ ಮಾಧ್ಯಮದ ಮುಂದೆ ಹೇಳಿಕೊಂಡಿದ್ದರು. ‘’ನಾ ಖಾವೂಂಗಾ, ನಾ ಖಾನೆ ದೂಂಗಾ’’ ಎಂದು ಊರೆಲ್ಲ ಡಂಗೂರ ಹೊಡ್ಕೊಂಡು ತಿರುಗಾಡುವ ನರೇಂದ್ರ ಮೋದಿಯವರು ಈ ಆರೋಪದ ಬಗ್ಗೆ ಮೌನವಾಗಿರುವುದು ಸಂಶಯವನ್ನು ಮಾತ್ರವಲ್ಲ, ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಿದೆ?

ವಕ್ಪ್ ಆಸ್ತಿ ವಿಚಾರದಲ್ಲಿ BY ವಿಜಯೇಂದ್ರ ಅವರು ವಹಿಸುತ್ತಿರುವ ಆಸಕ್ತಿಯನ್ನ ನೋಡಿದರೆ ಅವರು ಮತ್ತು ಅವರ ಕುಟುಂಬ ವರ್ಗ ವಕ್ಪ್ ಆಸ್ತಿ ಕಬಳಿಕೆಯಲ್ಲಿ ನೇರವಾಗಿ ಷಾಮೀಲಾಗಿರುವಂತೆ ಕಾಣುತ್ತಿದೆ. ಅವರ ಜೊತೆ ಬಿಜೆಪಿ ಪಕ್ಷದ ಮಹಾಮಹಿಮರೆಲ್ಲರೂ ಷಾಮೀಲಾಗಿರುವ ಸಂಶಯ ಇದೆ. ಬಿ.ಎಸ್.ಯಡಿಯೂರಪ್ಪ ಮತ್ತು ಬಸವರಾಜ್ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ವಕ್ಪ್ ಆಸ್ತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಗರಿಷ್ಠ ಸಂಖ‍್ಯೆಯಲ್ಲಿ ನೋಟೀಸ್ ನೀಡಿರುವುದನ್ನು ಈಗಾಗಲೇ ಮಾಧ್ಯಮಗಳು ವ್ಯಾಪಕವಾಗಿ ವರದಿ ಮಾಡಿವೆ. ಮಾಣಿಪ್ಪಾಡಿ ಅವರ ಬಾಯಿಮುಚ್ಚಿಸುವ ಷಡ್ಯಂತ್ರದಲ್ಲಿ ಯಾರೆಲ್ಲ ಷಾಮೀಲಾಗಿದ್ದಾರೆ? ವಕ್ಪ್ ಆಸ್ತಿ ಲೂಟಿಯಲ್ಲಿ ಬೇರೆ ಯಾರೆಲ್ಲ ಪಾಲುದಾರರಿದ್ದಾರೆ? ಎನ್ನುವ ಬಗ್ಗೆಯೂ ತನಿಖೆಯಾಗಬೇಕಾಗಿದೆ.

ಆಶ್ಚರ್ಯದ ಸಂಗತಿಯೆಂದರೆ, ಒಂದೆಡೆ ಇಂತಹ ಗಂಭೀರ ಆರೋಪ ಹೊತ್ತುಕೊಂಡಿರುವ ವಿಜಯೇಂದ್ರ ಅವರು ಬಿಜೆಪಿಯ ರಾಜ್ಯಾಧ್ಯಕ್ಷರಾಗುತ್ತಾರೆ, ಇನ್ನೊಂದೆಡೆ ಪಕ್ಷದ ಹೈಕಮಾಂಡ್ ಗೆ ಎರಡು ಸಾವಿರ ಕೋಟಿ ರೂಪಾಯಿ ಸಂದಾಯ ಮಾಡಿ ವಿಜಯೇಂದ್ರ ಅವರು ತಮ್ಮ ತಂದೆ ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಆರೋಪಿಸುತ್ತಾರೆ. ಈ ಎಲ್ಲ ಬೆಳವಣಿಗೆಗಳನ್ನು ಒಂದು ಕ್ರಮದಲ್ಲಿ ಜೋಡಿಸಿ ನೋಡಿದರೆ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಕರ್ನಾಟಕವನ್ನು ಎಟಿಎಂ ಮಾಡಿಕೊಂಡಿತ್ತು ಎಂದು ಆರೋಪಿಸಬೇಕಾಗುತ್ತದೆ.

ಪ್ರಧಾನಿ ನರೇಂದ್ರಮೋದಿ ಅವರೇ, ಕೋವಿಡ್ ಸಲಕರಣೆಗಳ ಖರೀದಿ ಭ್ರಷ್ಟಾಚಾರದಿಂದ ಹಿಡಿದು ವಕ್ಪ್ ಆಸ್ತಿ ಕಬಳಿಕೆಯಲ್ಲಿನ ಲೂಟಿ ವರೆಗೆ ರಾಜ್ಯ ಬಿಜೆಪಿಯ ಕಪಾಟಿನಿಂದ ಒಂದೊಂದೇ ಅಸ್ತಿ ಪಂಜರಗಳು ಉರುಳಿಬೀಳುತ್ತಲೇ ಇದೆ. ಈ ಹಗರಣಗಳಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದಲೇ ರಾಜ್ಯದ ಬಿಜೆಪಿ ನಾಯಕರು ನಮ್ಮ ಪಕ್ಷ ಮತ್ತು ನಾಯಕರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ ಜನರ ಗಮನ ಬೇರೆ ಕಡೆ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ.

ವಕ್ಪ್ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು @BYVijayendra ಅವರು ತಮಗೆ 150 ಕೋಟಿ ರೂಪಾಯಿ ಆಮಿಷವೊಡ್ಡಿದ್ದರು ಎಂದು @BJP4Karnataka ಸರ್ಕಾರದಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಅವರು ಪ್ರಧಾನಿ @narendramodi ಅವರಿಗೆ ನೇರವಾಗಿ ಪತ್ರ ಬರೆದಿರುವುದು ಬಯಲಾಗಿದೆ. ಪ್ರಧಾನಮಂತ್ರಿಯವರು ಈ ಆರೋಪವನ್ನು…

— Siddaramaiah (@siddaramaiah) December 14, 2024

Share. Facebook Twitter LinkedIn WhatsApp Email

Related Posts

ಸಂಧ್ಯಾಕಾಲದ ಬದುಕಿಗೆ ಪೊಲೀಸ್ ಇಲಾಖೆಯ ‘ಆಸರೆ’: ಕರ್ನಾಟಕದ 20,000 ಮನೆಗಳಲ್ಲಿ ಒಂಟಿ ವೃದ್ಧರ ವಾಸ!

05/04/2026 6:13 AM2 Mins Read

ವಿದ್ಯಾರ್ಥಿಗಳೇ ಗಮನಿಸಿ : ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಏಪ್ರಿಲ್ 7 ಅಥವಾ 8ಕ್ಕೆ ಪ್ರಕಟ | Karnataka PUC Result

05/04/2026 6:08 AM1 Min Read

ವಿದ್ಯಾರ್ಥಿಗಳೇ ಗಮನಿಸಿ : `ಪರೀಕ್ಷೆ ಫಲಿತಾಂಶ’ ಬಂದ ಬಳಿಕ ತಪ್ಪದೇ ಈ ಕೆಲಸಗಳನ್ನು ಮಾಡಿ.!

05/04/2026 6:00 AM2 Mins Read
Recent News

ಅಮೆರಿಕ-ಇರಾನ್ ನಡುವೆ ‘ರೇಸ್’: ಪತನಗೊಂಡ ಯುದ್ಧ ವಿಮಾನದ ಪೈಲಟ್ ಪತ್ತೆಗೆ ಜಾಲ; ಇರಾನ್‌ನಿಂದ ಭಾರಿ ಬಹುಮಾನ ಘೋಷಣೆ!

05/04/2026 6:14 AM

ಸಂಧ್ಯಾಕಾಲದ ಬದುಕಿಗೆ ಪೊಲೀಸ್ ಇಲಾಖೆಯ ‘ಆಸರೆ’: ಕರ್ನಾಟಕದ 20,000 ಮನೆಗಳಲ್ಲಿ ಒಂಟಿ ವೃದ್ಧರ ವಾಸ!

05/04/2026 6:13 AM

ವಿದ್ಯಾರ್ಥಿಗಳೇ ಗಮನಿಸಿ : ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಏಪ್ರಿಲ್ 7 ಅಥವಾ 8ಕ್ಕೆ ಪ್ರಕಟ | Karnataka PUC Result

05/04/2026 6:08 AM

ವಿದ್ಯಾರ್ಥಿಗಳೇ ಗಮನಿಸಿ : `ಪರೀಕ್ಷೆ ಫಲಿತಾಂಶ’ ಬಂದ ಬಳಿಕ ತಪ್ಪದೇ ಈ ಕೆಲಸಗಳನ್ನು ಮಾಡಿ.!

05/04/2026 6:00 AM
State News
KARNATAKA

ಸಂಧ್ಯಾಕಾಲದ ಬದುಕಿಗೆ ಪೊಲೀಸ್ ಇಲಾಖೆಯ ‘ಆಸರೆ’: ಕರ್ನಾಟಕದ 20,000 ಮನೆಗಳಲ್ಲಿ ಒಂಟಿ ವೃದ್ಧರ ವಾಸ!

By kannadanewsnow0905/04/2026 6:13 AM KARNATAKA 2 Mins Read

ಬೆಂಗಳೂರು: ಆಧುನಿಕತೆಯ ಓಟದಲ್ಲಿ ಅವಿಭಕ್ತ ಕುಟುಂಬಗಳು ಮಾಯವಾಗಿ ವಿಭಕ್ತ ಕುಟುಂಬಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ಬದಲಾವಣೆಯ ಅತಿದೊಡ್ಡ ಹೊಡೆತ ಬೀಳುತ್ತಿರುವುದು…

ವಿದ್ಯಾರ್ಥಿಗಳೇ ಗಮನಿಸಿ : ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಏಪ್ರಿಲ್ 7 ಅಥವಾ 8ಕ್ಕೆ ಪ್ರಕಟ | Karnataka PUC Result

05/04/2026 6:08 AM

ವಿದ್ಯಾರ್ಥಿಗಳೇ ಗಮನಿಸಿ : `ಪರೀಕ್ಷೆ ಫಲಿತಾಂಶ’ ಬಂದ ಬಳಿಕ ತಪ್ಪದೇ ಈ ಕೆಲಸಗಳನ್ನು ಮಾಡಿ.!

05/04/2026 6:00 AM

BIG NEWS : ರಾಜ್ಯದಲ್ಲಿ ಹಳೆಯ ವಾಹನಗಳಿಗೂ `HSRP’ ನಂಬರ್ ಪ್ಲೇಟ್ ಕಡ್ಡಾಯ : ವದಂತಿ ನಂಬಬೇಡಿ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ

05/04/2026 5:51 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.