ಬೆಂಗಳೂರು : ರಾಜ್ಯದಲ್ಲಿ ವಕ್ಫ್ ವಿವಾದಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರು ನಿನ್ನೆ ನಡೆದ ಸಭೆಯಲ್ಲಿ ಅಧಿಕಾರಿಗಳಿಗೆ ರೈತರಿಗೆ ಕೊಟ್ಟಿದ್ದ ನೋಟಿಸ್ ಗಳನ್ನು ಕೂಡಲೇ ಹಿಂಪಡೆಯಿರಿ ಎಂದು ಖಡಕ್ ಸೂಚನೆ ನೀಡಿದ್ದಾರೆ. ಆದರೆ ಇಷ್ಟಕ್ಕೆ ತಣ್ಣಗಾಗದ ಬಿಜೆಪಿಯು ಈ ಕುರಿತಂತೆ ಹೈಕೋರ್ಟಿಗೆ ಅರ್ಜಿ ಸಲ್ಲಿಸಲು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮುಂದಾಗಿದ್ದಾರೆ ಎನ್ನಲಾಗಿದೆ.
ಹೌದು ವಕ್ಫ್ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಸಂಸದ ತೇಜಸ್ವಿ ಸೂರ್ಯ ಅವರು ಹೈ ಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸೋಕೆ ಸಿದ್ಧತೆ ಮಾಡಿಕೊಂಡಿದ್ದರೆ ಎನ್ನಲಾಗಿದೆ. ಸೋಮವಾರ ತೇಜಸ್ವಿ ಸೂರ್ಯ ರಿಟ್ ಅರ್ಜಿ ಸಲ್ಲಿಸಲಿದ್ದಾರೆ. ವಕ್ಫ್ ಕಾಯ್ದೆ ತಿದ್ದುಪಡಿ ಕುರಿತ ಜೆಪಿಸಿ ಸದಸ್ಯರಾಗಿರುವ ತೇಜಸ್ವಿ ಸೂರ್ಯ ಅವರು ರೈತರ ಪಹಣಿಯಲ್ಲಿ ವಕ್ಫ್ ಎಂದು ನೋಂದಣಿ ಮಾಡಿರುವುದು ಹಾಗೂ ನಾವು ರೈತರಿಗೆ ನೋಟಿಸ್ ನೀಡಿರುವ ವಿಚಾರವಾಗಿ ರಿಟ್ ಅರ್ಜಿ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.
ನವೆಂಬರ್ 6 ರಂದು ರಾಜ್ಯಕ್ಕೆ JPC ಭೇಟಿ!
ರಾಜ್ಯದಲ್ಲಿ ಭುಗಿಲೆದ್ದ ವಕ್ಫ್ ವಿವಾದಕ್ಕೆ ಸಂಬಂಧಿಸಿದಂತೆ ನವೆಂಬರ್ 6 ಮತ್ತು 7 ರಂದು ರಾಜ್ಯಕ್ಕೆ ಜೆಪಿಸಿ (Joint Parliamentary Committee) ಎಂಟ್ರಿ ಆಗಲಿದೆ. ಕೇಂದ್ರ ಸರ್ಕಾರ ರಚಿಸಿರುವ ಜಂಟಿ ಸಂಸದೀಯ ಸಮಿತಿ ರಾಜ್ಯಕ್ಕೆ ಆಗಮಿಸಲಿದೆ. ಜಿಪಿಸಿ ಅಧ್ಯಕ್ಷ ಜಗದೀಕ ಪಾಲ್ ಇದೆ ನವೆಂಬರ್ 6 ರಂದು ರಾಜ್ಯಕ್ಕೆ ಭೇಟಿ ಸಾಧ್ಯತೆ ಇದೆ ಎನ್ನುವ ಮಾಹಿತಿ ಸಿಕ್ಕಿದೆ. ನವೆಂಬರ್ 6 ರಂದು ಹುಬ್ಬಳ್ಳಿಯಲ್ಲಿ ಉತ್ತರ ಕರ್ನಾಟಕ ಭಾಗದ ರೈತರ ಭೇಟಿ ಮಾಡಲಿದ್ದು, ಬಳಿಕ ನವೆಂಬರ್ 7ಕ್ಕೆ ಬೆಂಗಳೂರಿನಲ್ಲಿ ದಕ್ಷಿಣ ಕರ್ನಾಟಕ ರೈತರ ಭೇಟಿ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.