ಬೆಂಗಳೂರು : ಪಹಲ್ಗಾಮ್ ಉಗ್ರ ದಾಳಿಯ ಪ್ರತಿಕಾರವಾಗಿ ನಿನ್ನೆ ಭಾರತೀಯ ಸೇನೆ ಪಾಕಿಸ್ತಾನದ ಉಗ್ರರ ನೆಲೆಗಳನ್ನು ಧ್ವಂಸ ಮಾಡಿದೆ ಇದರಲ್ಲಿ ನೂರಕ್ಕೂ ಅಧಿಕ ಉಗ್ರರು ಸಾವನಪ್ಪಿದ್ದಾರೆ. ಇದೀಗ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದ ಎಲ್ಲಾ ಅಣೆಕಟ್ಟುಗಳಿಗೆ ತಕ್ಷಣ ಭದ್ರತೆ ಒದಗಿಸುವಂತೆ ಜಲಸಂಪನ್ಮೂಲ ಇಲಾಖೆಯ ಅಪರ ಕಾರ್ಯದರ್ಶಿ, ಈ ಕುರಿತು ಆದೇಶ ಹೊರಡಿಸಿದ್ದಾರೆ.
ಹೌದು ರಾಜ್ಯದ ಎಲ್ಲಾ ಆಣೆಕಟ್ಟುಗಳಿಗೆ ಭದ್ರತೆಗೆ ಸೂಚನೆ ನೀಡಲಾಗಿದೆ. ಅಣೆಕಟ್ಟುಗಳಿಗೆ ತಕ್ಷಣ ಭದ್ರತೆ ಒದಗಿಸಲು ಜಲಸಂಪನ್ಮೂಲ ಇಲಾಖೆಯ ಅಪರ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.ರಾಜ್ಯದ ಎಲ್ಲಾ ಆಣೆಕಟ್ಟುಗಳ ಭದ್ರತಾ ನಿರ್ವಹಣಾ ಸಂಸ್ಥೆಗಳು, ನಿಗಮಗಳಿಗೆ ಸೂಚಿಸಿ ಜಲಸಂಪನ್ಮೂಲ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ಪೊಲೀಸ್ ಇಲಾಖೆ ಸಮನ್ವಯದೊಂದಿಗೆ ಭದ್ರತೆ ಒದಗಿಸುವಂತೆ ಸಂಪೂರ್ಣ ಭದ್ರತಾ ವ್ಯವಸ್ಥೆ ಕೈಗೊಳ್ಳುವಂತೆ ಆದೇಶ ಹೊರಡಿಸಿದ್ದಾರೆ.