ಚಾಮರಾಜನಗರ : ಗ್ರಾಮಪಂಚಾಯಿತಿ ಕಚೇರಿ ಎದುರೇ ವಾಟರ್ ಮ್ಯಾನ್ ನೇಣಿಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.
ಚಾಮರಾಜನಗರ ತಾಲೂಕಿನ ಹೊಂಗನೂರು ಗ್ರಾಮದಲ್ಲಿ ಗ್ರಾಮಪಂಚಾಯಿತಿ ಕಚೇರಿ ಮುಂದೆಯೇ ವಾಟರ್ ಮ್ಯಾನ್ ಚಿಕ್ಕಸು ನಾಯಕ (65) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹೊಂಗನೂರು ಗ್ರಾಮಪಂಚಾಯಿತಿನಲ್ಲಿ ಚಿಕ್ಕಸು ವಾಟರ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದರು. ಮುಂಜಾನೆ ಗ್ರಾಮಸ್ಥರು ಗ್ರಾ.ಪಂ.ಕಚೇರಿಗೆ ಬಂದಾಗ ಚಿಕ್ಕಸು ಗ್ರಾ.ಪಂ. ಬಾಗಿಲು ಬಳಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಾಟರ್ ಮ್ಯಾನ್ ಚಿಕ್ಕಸು ಆತ್ಮಹತ್ಯೆಗೆ ಪೊಲೀಸರು ನಿಖರ ಕಾರಣಕ್ಕಾಗಿ ತನಿಖೆ ನಡೆಸುತ್ತಿದ್ದಾರೆ.ಸ್ಥಳಕ್ಕೆ ಚಾಮರಾಜನಗರ ಪೂರ್ವ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಸಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಚಾಮರಾಜನಗರ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.