ನವದೆಹಲಿ : ಕಾಂಗ್ರೆಸ್ ಸೇರಿ ಎಲ್ಲಾ ವಿಪಕ್ಷಗಳ ಬ್ಯಾಂಕ್ ಅಕೌಂಟ್ ಅನ್ನು ಫ್ರೀಜ್ ಮಾಡಿದ್ದಾರೆ ಎಂದು ಇಂಡಿಯಾ ಒಕ್ಕೂಟದ ಮಹಾ ರ್ಯಾಲಿಯಲ್ಲಿ ರಾಹುಲ್ ಗಾಂಧಿ ಹೇಳಿಕೆ ನೀಡಿದರು. ದೆಹಲಿಯ ರಾಮಲೀಲಾ ಮೈದಾನದಲ್ಲಿ ಇಂಡಿಯಾ ಒಕ್ಕೂಟ ಕೇಂದ್ರ ಸರ್ಕಾರದ ವಿರುದ್ಧ ರ್ಯಾಲಿ ನಡೆಸುತ್ತಿದೆ.
ಲೋಕಸಭಾ ಚುನಾವಣೆಗೆ ವೆಚ್ಚ ಮಾಡಲು ನಮ್ಮ ಬಳಿ ಹಣವೇ ಇಲ್ಲ. ಸಾಂವಿಧಾನಿಕ ಸಂಸ್ಥೆಗಳನ್ನು ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಐಟಿ ಇಡಿ ಸಿಬಿಐ ಪೊಲೀಸರನ್ನು ಬಳಸಿ ಚುನಾವಣೆ ನಡೆಸುತ್ತಿದೆ. ಚುನಾವಣೆಗೆ ಘೋಷಣೆಗೂ ಮೊದಲೇ ನಾಲ್ಕು ಸ್ಥಾನ ಗೆಲ್ಲುತ್ತೇವೆ ಅಂತಿದ್ದಾರೆ. ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ನಾಯಕರು ಹೇಳಿಕೆಯನ್ನು ನೀಡುತ್ತಿದ್ದಾರೆ. ಯಾವ ಆಧಾರದಲ್ಲಿ 400 ಸ್ಥಾನ ಗೆಲ್ಲುವುದಾಗಿ ಬಿಜೆಪಿಯವರು ಹೇಳುತ್ತಾರೆ ಇಂಡಿಯಾ ಒಕ್ಕೂಟದ ಮಹಾ ರ್ಯಾಲಿಯಲ್ಲಿ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ವಿಪಕ್ಷಗಳ ಬ್ಯಾಂಕ್ ಖಾತೆಯನ್ನು ಕೇಂದ್ರ ಸರ್ಕಾರ ಫ್ರೀಜ್ ಮಾಡಿದೆ. ಇದನ್ನೆಲ್ಲಾ ನೋಡಿದ್ರೆ ಮ್ಯಾಚ್ ಫಿಕ್ಸಿಂಗ್ ಆದಂತೆ ಆಗಿದೆ. ಈ ಚುನಾವಣೆ ಸಾಮಾನ್ಯ ಚುನಾವಣೆ ಅಲ್ಲ ದೇಶದ ಉಳಿವು ಸಾಂವಿಧಾನದ ಉಳಿವಿಗಾಗಿ ನಡೆಯುತ್ತಿರುವಂತಹ ಚುನಾವಣೆಯಾಗಿದೆ.ಬಿಜೆಪಿಯೇತರ ರಾಜ್ಯಗಳ ಸಿಎಂಗಳನ್ನು ಬಿಜೆಪಿ ಟಾರ್ಗೆಟ್ ಮಾಡುತ್ತಿದೆ ಎಂದು ಆರೋಪಿಸಿದರು.
ಹೇಮಂತ್ ಸೋರೆನ್ ಅರವಿಂದ್ ಕೇಜ್ರಿವಾಲರನ್ನು ಬಿಜೆಪಿ ಜೈಲಿಗೆಟ್ಟಿದೆ.ಪ್ರಜಾಪ್ರಭುತ್ವ ಸಂವಿಧಾನ ಉಳಿಯಬೇಕೆಂದರೆ ಬಿಜೆಪಿಯನ್ನು ಸೋಲಿಸಬೇಕು. ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲೇಬೇಕು ಎಂದು ಇಂಡಿಯಾ ಒಕ್ಕೂಟದ ಮಹಾ ರ್ಯಾಲಿಯಲ್ಲಿ ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.