ಬೆಂಗಳೂರು : ಭಾಷಾ ವಿವಾದ ತಾರಕಕ್ಕೆ ಏರುತ್ತಿದ್ದಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಇದೀಗ ಸ್ಪಷ್ಟನೆ ಕೊಟ್ಟಿದ್ದು ಭಾಷಾ ಮಸೂದೆಯಲ್ಲಿ ಭಾಷಾ ಅಲ್ಪಸಂಖ್ಯಾತರ ರಕ್ಷಣೆ ಆಗುತ್ತದೆ ಕನ್ನಡ ತಮಿಳು ಭಾಷಾ ಅಲ್ಪಸಂಖ್ಯಾತರ ಹಕ್ಕು ರಕ್ಷಣೆ ಆಗುತ್ತದೆ ಹಕ್ಕುಗಳ ರಕ್ಷಣೆಯ ಬಗ್ಗೆ ಸೆಕ್ಷನ್ ಏಳರಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ ಮಸೂದೆಯಲ್ಲಿ ರಕ್ಷಣಾತ್ಮಕ ನಿಯಮಗಳನ್ನು ಅಳವಡಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಬರೆದ ಪತ್ರಕ್ಕೆ ಸ್ಪಷ್ಟನೆ ನೀಡಿದ್ದಾರೆ.
ರಾಷ್ಟ್ರೀಯ ಶಿಕ್ಷಣ ಪಠ್ಯಕ್ರಮ ಅನ್ವಯ ಲಭವಿರುವ ಭಾಷೆ ಭಾಷೆಯನ್ನು ಆಯ್ಕೆ ಮಾಡಿಕೊಳ್ಳುವ ಸಂಪೂರ್ಣ ಸ್ವತಂತ್ರವಿದೆ. ಬೇರೆಯ ರಾಜ್ಯಗಳು ಅಥವಾ ವಿದೇಶದ ವಿದ್ಯಾರ್ಥಿಗಳು 9 ಮತ್ತು 10ನೇ ತರಗತಿ ಹಾಗೂ ಹೈಯರ್ ಸೆಕೆಂಡರಿ ಹಂತಗಳಲ್ಲಿ ಮಲಯಾಳಂ ಪರೀಕ್ಷೆ ಬರೆಯುವುದು ಕಡ್ಡಾಯಗೊಳಿಸಿಲ್ಲ. ಕೇರಳ ಸರ್ಕಾರದ ಈ ಮಲಯಾಳಂ ನೀತಿಯು ಸಂವಿಧಾನದ 346 ಮತ್ತು 347ನೇ ವಿಧಿಗಳ ಪ್ರಕಾರ ಇದೆ ಎಂದು ತಿಳಿಸಿದ್ದಾರೆ.
ಕೇರಳದ ಪ್ರಗತಿ ಯಾವಾಗಲೂ ಸಮಾನತೆ ಮತ್ತು ಸಹೋದರತ್ವದಲ್ಲಿ ನೆಲೆಗೊಂಡಿರುವ ಸಮಗ್ರ ಅಭಿವೃದ್ಧಿಯಲ್ಲಿ ಬೇರೂರಿದೆ. ಜಾತ್ಯತೀತತೆ ಮತ್ತು ಬಹುತ್ವದ ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವಲ್ಲಿ ನಮ್ಮ ಸರ್ಕಾರ ದೃಢವಾಗಿದೆ ಎಂದು ಕೇರಳ ಸಿಎಂ ತಿಳಿಸಿದ್ದಾರೆ.
ಅಧಿಸೂಚಿತ ಪ್ರದೇಶಗಳಲ್ಲಿ, ತಮಿಳು ಮತ್ತು ಕನ್ನಡ ಭಾಷಿಕರು ಸಚಿವಾಲಯ, ಇಲಾಖಾ ಮುಖ್ಯಸ್ಥರು ಮತ್ತು ಸ್ಥಳೀಯ ಕಚೇರಿಗಳೊಂದಿಗೆ ಅಧಿಕೃತ ಪತ್ರ ವ್ಯವಹಾರಕ್ಕಾಗಿ ತಮ್ಮ ಮಾತೃಭಾಷೆಯನ್ನು ಬಳಸುವುದನ್ನು ಮುಂದುವರಿಸಬಹುದು. ಉತ್ತರಗಳನ್ನು ಅದೇ ಭಾಷೆಗಳಲ್ಲಿ ನೀಡಲಾಗುತ್ತದೆ. ಮಲೆಯಾಳಂ ಅಲ್ಲದ ಮಾತೃಭಾಷೆ ವಿದ್ಯಾರ್ಥಿಗಳು ರಾಷ್ಟ್ರೀಯ ಶಿಕ್ಷಣ ಪಠ್ಯಕ್ರಮಕ್ಕೆ ಅನುಗುಣವಾಗಿ ಶಾಲೆಗಳಲ್ಲಿ ಲಭ್ಯವಿರುವ ಭಾಷೆಗಳನ್ನು ಆಯ್ಕೆ ಮಾಡಲು ಸ್ವತಂತ್ರರು ಎಂದು ಹೇಳಿದ್ದಾರೆ.
ಇತರ ರಾಜ್ಯಗಳು ಅಥವಾ ವಿದೇಶಗಳ ವಿದ್ಯಾರ್ಥಿಗಳು 9 ಮತ್ತು 10 ಅಥವಾ ಹೈಯರ್ ಸೆಕೆಂಡರಿ ಹಂತಗಳಲ್ಲಿ ಮಲೆಯಾಳಂ ಪರೀಕ್ಷೆಗಳಿಗೆ ಹಾಜರಾಗಲು ಒತ್ತಾಯಿಸಲಾಗುವುದಿಲ್ಲ. ಕೇರಳದ ಭಾಷಾ ನೀತಿಯು 1963 ರ ಅಧಿಕೃತ ಭಾಷಾ ಕಾಯ್ದೆ ಮತ್ತು ಭಾರತದ ಸಂವಿಧಾನದ 346, 347 ನೇ ವಿಧಿಗಳಿಗೆ ಸಂಪೂರ್ಣವಾಗಿ ಹೊಂದಿಕೆಯಾಗಿದೆ. ಭಾರತದ ವೈವಿಧ್ಯತೆಯನ್ನು ಆಚರಿಸಬೇಕು, ಬಲವಂತಪಡಿಸಬಾರದು ಎಂದು ಸ್ಪಷ್ಟನೆ ನೀಡಿದ್ದಾರೆ.








