ಬೆಂಗಳೂರು: ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಇಂದಿನ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮಗಳು ರದ್ದು ಮಾಡಲಾಗಿದೆ.
ಇಂದು ಸಿಎಂ ಸಿದ್ದರಾಮಯ್ಯ ಅವರು ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲಾ ಪ್ರವಾಸ ನಿಗದಿಯಾಗಿತ್ತು. ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲಾ ಪ್ರವಾಸಗಳು ರದ್ದಾಗಿವೆ.
ಭಾರಿ ಮಳೆಯಿಂದಾಗಿ ಹವಾಮಾನ ವೈಪರೀತ್ಯವುಂಟಾದ ಕಾರಣಕ್ಕೆ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲಾ ಪ್ರವಾಸ ಮುಂದೂಡಿದ್ದಾರೆ ಎಂದು ತಿಳಿದುಬಂದಿದೆ.