ನವದೆಹಲಿ: ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿ ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಬೆಳಿಗ್ಗೆ 8 ಗಂಟೆಗೆ ಸರಿಯಾಗಿ ಆರಂಭವಾಗಿದ್ದು, 823 ಕ್ಷೇತ್ರಗಳ ಅಭ್ಯರ್ಥಿಗಳ ಹಣೆಬರಹ ಇಂದು ಮಧ್ಯಾಹ್ನದ ವೇಳೆಗೆ ಬಹುತೇಕ ಸ್ಪಷ್ಟವಾಗಲಿದೆ.
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಮೊದಲಿಗೆ ಅಂಚೆ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ 5 ಕ್ಷೇತ್ರಗಳಲ್ಲಿ ಮುನ್ನಡ ಸಾಧಿಸಿದ್ದರೆ, ಟಿಎಂಸಿ 6 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.








