ರಾಮನಗರ : ಜಿಲ್ಲೆಯ ಚನ್ನಪಟ್ಟಣ ಉಪಚುನಾವಣೆ ಇದೀಗ ಭಾರಿ ರಣಕಣದಿಂದ ಕೂಡಿದ್ದು, ಒಂದು ಕಡೆ ಮೈತ್ರಿ ಪಕ್ಷದ ಪರವಾಗಿ ಸಿಪಿ ಯೋಗೇಶ್ವರ್ ಅವರು ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದ್ದು, ಇನ್ನೊಂದು ಕಡೆ ಚನ್ನಪಟ್ಟಣ ಬೈ ಎಲೆಕ್ಷನ್ ನಲ್ಲಿ ಯಾರೇ ಸ್ಪರ್ಧಿಸಿದರು, ಕಾಂಗ್ರೆಸ್ ನಿಂದ ನಾನೆ ಅಭ್ಯರ್ಥಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.
ಇಂದು ಪಟ್ಟಣದ ಟಿಪ್ಪು ಮೈದಾನದಲ್ಲಿ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ದಾಖಲೆ ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಂದಿನ ಉಪಚುನಾವಣೆ ಟಿಕೆಟ್ ವಿಚಾರವಾಗಿ ನಾನು ಈ ವೇದಿಕೆ ಮೇಲೆ ಮಾತನಾಡುವುದಿಲ್ಲ. ಇಲ್ಲಿ ನಾನೇ ಅಭ್ಯರ್ಥಿ. ನಾನು ಅಧ್ಯಕ್ಷನಾಗಿ ಯಾರಿಗೆ ಟಿಕೆಟ್ ನೀಡುತ್ತೇನೋ ಅವರಿಗೆ ಬೆಂಬಲ ನೀಡಿ ಎಂದರು.
ನಾನು ನಿಮ್ಮ ಸೇವಕನಾಗಿ ಬಂದಿದ್ದೇನೆ. ನಿಮ್ಮ ಮೇಲೆ ಅಧಿಕಾರ ಚಲಾಯಿಸಲು ಬಂದಿಲ್ಲ. ನಿಮ್ಮ ಮನೆಗೆ ಅವಕಾಶ ಬಂದಿದೆ, ಯಾಮಾರಬೇಡಿ. ಚನ್ನಪಟ್ಟಣದ ಜನರಿಗೆ ಒಳ್ಳೆಯದಾಗಬೇಕು. ಈ ಜನರ ಋಣ ತೀರಿಸಬೇಕು. ಈ ಕ್ಷೇತ್ರದ ಜನರ ಜತೆಗಿನ ಸಂಬಂಧ ಗಟ್ಟಿ ಮಾಡಿಕೊಳ್ಳಬೇಕು ಎಂಬುದು ನಮ್ಮ ಉದ್ದೇಶ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.