ಕಲಬುರಗಿ : ಗಂಡ ಹೆಂಡತಿಯ ಮಧ್ಯೆ ಗಲಾಟೆ ಸಂಭವಿಸಿದ ಹಿನ್ನೆಲೆಯಲ್ಲಿ ಗಲಾಟೆ ವಿಕೋಪಕ್ಕೆ ತಿರುಗಿದಾಗ ಮನನೊಂದ ಗೃಹಿಣಿ ಓರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರ್ಗಿ ತಾಲೂಕಿನ ಮಾಡಬೂಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ನಿಪ್ಪಾಣಿ ಗ್ರಾಮದ ಸುಜಾತ ತಳವಾರ (28) ಆತ್ಮಹತ್ಯೆ ಮಾಡಿಕೊಂಡಂತಹ ಗೃಹಿಣಿ ಎಂದು ತಿಳಿದುಬಂದಿದೆ. ಸುಜಾತ ಪತಿ ಸಿದ್ದು ಜೊತೆಗೆ ಜಗಳವಡಿದ್ದಾರೆ. ಮೃತ ಮಹಿಳೆಗೆ ಇಬ್ಬರು ಮಕ್ಕಳು ಇದ್ದು, ಲಾರಿ ಚಾಲಕನಾಗಿರುವ ಸಿದ್ದು ಮದ್ಯಪಾನ ಮಾಡಿ ಪತ್ನಿ ಜೊತೆ ಗಲಾಟೆ ಮಾಡಿಕೊಂಡಿರುವ ಪರಿಣಾಮ ಮನೆಯಲ್ಲಿ ನೇಣು ಬಿಗಿದುಕೊಂಡು ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.
ಆಕೆಯ ಗಂಡ ಸಿದ್ದು ಕೊಲೆ ಮಾಡಿ ನೇಣು ಹಾಕಿರುವುದಾಗಿ ಸಂಬಂಧಿಕರು ಆರೋಪ ಮಾಡಿದ್ದಾರೆ. ಈ ಒಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುರಿತು ಮಾಡಬೂಳ ಪೊಲೀಸರು ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.