ಚಾಮರಾಜನಗರ : ರಾಜ್ಯದಲ್ಲಿ ಸಾಲಗಾರರ ಕಾಟಕ್ಕೆ ಸರಣಿ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಿದ್ದು ಇದೀಗ ಚಾಮರಾಜನಗರದಲ್ಲಿ ಮನೆ ಕಟ್ಟಲು ಪತಿಯೊಬ್ಬರು ಸಾಲ ಮಾಡಿದ್ದಾರೆ. ಪತಿಯ ಸಾಲದ ಚಿಂತೆಯಲ್ಲಿ ಮನನೊಂದ ಮಹಿಳೆ ಒಬ್ಬರು ಇದೀಗ ಆತ್ಮಹತ್ಯೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕೆರೆ ಕೋಟೆ ಗ್ರಾಮದಲ್ಲಿ ನಡೆದಿದೆ.
ಹೌದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕೋಟೆಕೆರೆ ಗ್ರಾಮದ ಮಹಾದೇವಮ್ಮ ಎನ್ನುವ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮನೆ ನಿರ್ಮಿಸಲು ಮಹಾದೇವಮ್ಮ ಪತಿ 5 ಲಕ್ಷ ಸಾಲ ಮಾಡಿಕೊಂಡಿದ್ದರು. ಸಾಲ ಮಾಡಿದ್ದರಿಂದ ಖಿನ್ನತೆಗೆ ಒಳಗಾಗಿದ್ದ ಮಹಾದೇವಮ್ಮ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿ ಮಾಡಿದ್ದ ಸಾಲಕ್ಕೆ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದ್ದು ಈ ಕುರಿತು ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






![ಪೊಲೀಸ್ ಇನ್ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ : ಒಂದು ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ದಾಳಿ ಯಾದಗಿರಿ ಲೋಕಾಯುಕ್ತ ದಾಳಿ ಇನ್ಸ್ಪೆಕ್ಟರ್ ಬಂಧನ [Yadgiri Lokayukta Raid Inspector Arrested], ಗುರುಮಠಕಲ್ ಪೊಲೀಸ್ ಭ್ರಷ್ಟಾಚಾರ ಪ್ರಕರಣ [Gurmitkal Police Corruption Case], ವೀರಣ್ಣ ದೊಡ್ಡಮನಿ ಲೋಕಾಯುಕ್ತ ಟ್ರ್ಯಾಪ್ [Veeranna Doddamani Lokayukta Trap]. ಟ್ಯಾಗ್ಸ್ (Tags)](https://kannadanewsnow.com/kannada/wp-content/uploads/2026/05/ಲಂಚ-ಪಡೆಯುವಾಗ-ಲೋಕಾಯುಕ್ತ-ಬಲೆಗೆ-ಬಿದ್ದ-ಗುರುಮಠಕಲ್-450x253.jpg)
