ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ED ಸಂಕಷ್ಟ ಎದುರಾಗಿದ್ದು, ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಇಸಿಐಆರ್ ದಾಖಲಿಸಿಕೊಂಡಿದೆ. ಇದರ ಮಧ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ನಿ ಪಾರ್ವತಿಯವರು 14 ನಿಮಿಷಗಳ ಕ್ರಯ ಪತ್ರವನ್ನು ಹಿಂದಿರುಗಿಸುತ್ತೇನೆ ಎಂದು ಪತ್ರ ಬರೆದಿದ್ದಾರೆ ಎಂದು ತಿಳಿದು ಬಂದಿದೆ.
ಹೌದು ಮುಡಾ ಸೈಟ್ ಹಿಂದಿರುಗಿಸಲು ಬಯಸುತ್ತಿದ್ದೇನೆ ಎಂದು ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಸಿಎಂ ಸಿದ್ದರಾಮಯ್ಯ ಪತ್ನಿ ಬಿ.ಎಂ ಪಾರ್ವತಿ ಪತ್ರ ಬರೆದಿದ್ದಾರೆ.ಮುಡಾಗೆ ಸಂಬಂಧ ಪಟ್ಟಂತೆ 14 ನಿವೇಶನಗಳ ಪತ್ರಗಳನ್ನು ಹಿಂದಿರುಗಿಸುವುದಾಗಿ ಪತ್ರ ಬರೆದಿದ್ದಾರೆ ಎಂದು ತಿಳಿದುಬಂದಿದೆ.
ಮೈಸೂರಿನ ವಿಜಯನಗರದಲ್ಲಿ ಮೂರನೇ ಮತ್ತು ನಾಲ್ಕನೇ ಹಂತದಲ್ಲಿ ಈ ಒಂದು ನಿವೇಶನಗಳು ಇವೆ. ಹಾಗಾಗಿ 14 ನಿವೇಶನಗಳನ್ನು ಹಿಂದಿರುಗಿಸುವುದಾಗಿ ಪತ್ನಿ ಪಾರ್ವತಿ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಈ ಒಂದು ಪ್ರಕರಣ ಯಾವ ರೀತಿ ತಿರುವು ಪಡೆದುಕೊಳ್ಳುತ್ತದೆ ಎಂಬುದು ಕಾದು ನೋಡಬೇಕಾಗಿದೆ.