ಮಂಡ್ಯ : ಲೋಕಸಭಾ ಚುನಾವಣೆ ಸಮಿತಿ ಸುತ್ತಿದಂತೆ ಇದೀಗ ಮಂಡ್ಯ ಕ್ಷೇತ್ರದಲ್ಲಿ ಅಭ್ಯರ್ಥಿ ಘೋಷಣೆ ಆಗದೆ ಇದ್ದರೂ ಕೂಡ ಜೆಡಿಎಸ್ ಫುಲ್ ಆಕ್ಟಿವ್ ಆಗಿದ್ದು, ಇಂದು ಮಂಡ್ಯ ಜಿಲ್ಲೆಯಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಕಾರ್ಯಕರ್ತರ ಸಭೆ ನಡೆಯಿತು. ಈ ಸಭೆಯಲ್ಲಿ ಮಾರ್ಚ್ 25 ರಂದು ಮಂಡ್ಯ ಅಭ್ಯರ್ಥಿ, ಹೆಸರನ್ನು ಘೋಷಣೆ ಮಾಡುತ್ತೇನೆ ಎಂದು ತಿಳಿಸಿದರು.
ಮಂಡ್ಯದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಫಿಕ್ಸ್ ಎಂದು ಹೇಳಲಾಗುತ್ತಿದ್ದು ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಸುಳಿವು ಕೊಟ್ಟಿದ್ದಾರೆ. ಹೆಚ್‍ಡಿ ಕುಮಾರಸ್ವಾಮಿ ಮಾರ್ಚ್ 25ರಂದು ಮಂಡ್ಯ ಅಭ್ಯರ್ಥಿ ಹೆಸರನ್ನು ಘೋಷಣೆ ಮಾಡುತ್ತೇವೆ ಎಂದು ತಿಳಿಸಿದರು. ಲೋಕಸಭಾ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿ ಒಪ್ಪಿಸುತ್ತೇವೆ, ನಿಮ್ಮ ಆಸೆಗೆ ನಾವು ಭಂಗ ತರುವುದಿಲ್ಲ.ನಿಮ್ಮ ಆಶಯ ಪ್ರಕಾರ ಅದನ್ನು ನೆರವೇರಿಸಿಕೊಳ್ಳುತ್ತೇನೆ.ನಿಮ್ಮ ಭಾವನೆಗಳಿಗೆ ಯಾವುದೇ ಕಾರಣಕ್ಕೂ ನಿರಾಸೆ ಮಾಡುವುದಿಲ್ಲ ನಿಮ್ಮ ಆಸೆ ಪ್ರಕಾರ ಅದನ್ನು ನೆರವೇರಿಸುತ್ತೇನೆ ಎಂದು ತಿಳಿಸಿದರು.
ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ನಾನು ರಾಜಕೀಯ ಕ್ಷೇತ್ರಕ್ಕೆ ಬರಬೇಕು ಅಂದುಕೊಂಡವನಲ್ಲ. ಸಿನಿಮಾ ಹಂಚಿಕೆದಾರನಾಗಿದ್ದೆ ಆಕಸ್ಮಿಕವಾಗಿ ರಾಜಕೀಯಕ್ಕೆ ಬಂದೆ. ನಾನು ಮಂಡ್ಯ ಜಿಲ್ಲೆಯ ಜನರ ಜೊತೆ ಮೊದಲಿನಿಂದಲೂ ಇದ್ದೇನೆ. 2019 ರ ಚುನಾವಣೆಯಲ್ಲಿ ಹೊಂದಾಣಿಕೆ ಎಂದು ಕುತ್ತಿಗೆ ಕೊಯ್ದರು ಎಂದು ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದರು.
ಅದಕ್ಕೆ ಉತ್ತರ ಕೊಡುವ ಶಕ್ತಿ ಮಂಡ್ಯ ಜನರ ಕೈಯಲ್ಲಿದೆ. ಜನ್ಮಭೂಮಿ ಹಾಸನ, ರಾಜಕೀಯ ಭವಿಷ್ಯ ನೀಡಿದ್ದು ರಾಮನಗರ, ಆದರೆ ನನ್ನ ಜೀವ ಮಿಡಿಯುವುದು ಮಂಡ್ಯಕ್ಕಾಗಿ ಸ್ವಾಭಿಮಾನ ಎನ್ನುವುದು ಮಾತಿನಲ್ಲಿ ಅಲ್ಲ ಕೆಲಸದಲ್ಲಿರಬೇಕು. ನಾಟಿ ಸ್ಟೈಲ್ ಅಂತಾರೆ ದುಡ್ಡಿನಿಂದ ರಾಜಕೀಯ ಮಾಡುವುದಲ್ಲ ಈ ಚುನಾವಣೆ ಕೆಲವರಿಗೆ ಕಲೆಕ್ಷನ್ ಮಾಡಿಕೊಳ್ಳಲು ಒಳ್ಳೆಯ ಅವಕಾಶವಿದೆ ಎಂದು ತಿಳಿಸಿದರು.
ಮಂಡ್ಯದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಮಾರ್ಚ್ 21ಕ್ಕೆ ನನಗೆ ಆಪರೇಷನ್ ಇದೆ. ನನಗೆ 84 ವರ್ಷ ಆಯಸ್ಸು ಎಂದು ಜ್ಯೋತಿಷಿಗಳು ಹೇಳಿದ್ದಾರೆ. ಈ ಜೀವ ಇಷ್ಟು ಬೇಗ ಮಣ್ಣಿಗೆ ಹೋಗುವುದಿಲ್ಲ. ಜನರು ಸರ್ಟಿಫಿಕೇಟ್ ನೀಡಿದ ಮೇಲೆ ಈ ಜೀವ ಮಣ್ಣಿಗೆ ಹೋಗುತ್ತದೆ.ಜನರ ಋಣ ತೀರಿಸಿದ ಮೇಲೆ ನಾನು ಮಣ್ಣಿಗೆ ಹೋಗುವುದು. ಅಲ್ಲಿಯವರೆಗೆ ನಾನು ಮಣ್ಣಿಗೆ ಹೋಗುವುದಿಲ್ಲ. ಎಚ್ ಡಿ ದೇವೇಗೌಡರು ಜ್ಯೋತಿಷಿಗಳ ಮಾತು ಕೇಳಿ ಬದುಕಿದ್ದಾರೆ ಎಂದು ಮಂಡ್ಯದಲ್ಲಿ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ತಿಳಿಸಿದರು.