ಬೆಂಗಳೂರು : ಮುಡಾ ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ವಿಪಕ್ಷಗಳು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಅಗ್ರಹಿಸುತ್ತಿವೆ. ಇದರ ಬೆನ್ನಲ್ಲೆ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮಿ ಮತ್ತೊಮ್ಮೆ ಸ್ಫೋಟಕ ಭವಿಷ್ಯ ನುಡಿದಿದ್ದು, ರಾಜನ ಮೇಲೆ ಭಂಗ ಬೀರಲಿದೆ ಎಂದು ತಿಳಿಸಿದ್ದಾರೆ. ಈ ಹೇಳಿಕೆ ಮೂಲಕ ಸಿಎಂ ಬದಲಾಗುತ್ತರಾ? ಎಂಬ ಪ್ರಶ್ನೆ ಉದ್ಭವಿಸಿದೆ.
ಹೌದು ಕರ್ನಾಟಕ ಸರ್ಕಾರದ ಬಗ್ಗೆ ಕೋಡಿಮಠ ಶ್ರೀ ಮತ್ತೊಮ್ಮೆ ಸ್ಫೋಟಕ ಭವಿಷ್ಯ ಹೇಳಿದ್ದಾರೆ. ರಾಜ್ಯದ ಪ್ರಾಕೃತಿಕ ಸ್ಥಿತಿಗತಿ ಮತ್ತು ಸರ್ಕಾರದ ಬಗ್ಗೆ ಅವರು ಭವಿಷ್ಯ ಹೇಳಿದ್ದಾರೆ. ಮಳೆಯಿಂದ ಜಾಸ್ತಿ ತೊಂದರೆ ಇದೆ. ಪ್ರಾಕೃತಿಕ ದೋಷ ಇದೆ. ಭೂಮಿ, ಅಗ್ನಿ, ವಾಯು, ಆಕಾಶ ಎಲ್ಲಾ ಕಡೆ ತೊಂದರೆ ಆಗುತ್ತದೆ. ಐದು ಕಡೆಯೂ ತೊಂದರೆ ಇದೆ. ಇನ್ನೂ ಒಂದು ವಿಚಾರ, ಆಕಾಶದಿಂದ ಕೂಡ ದೊಡ್ಡ ಸುದ್ದಿ ಬರಬಹುದು ಎಂದು ಅವರು ಹೇಳಿದ್ದಾರೆ.
ಜನ ಇದ್ದಂಗೆ ಸಾಯುತ್ತಾರೆ. ಭೂಮಿ ಬಿರುಕು ಬಿಡುತ್ತದೆ ಎಂದಿದ್ದೆ. ಗುಡ್ಡ ಹೋಗುತ್ತದೆ ಎಂದು ಹೇಳಿದ್ದೆ. ಪ್ರವಾಹದಲ್ಲಿ ಜಗತ್ತಿನಾದ್ಯಂತ ಅನೇಕ ಪ್ರದೇಶಗಳು ಮುಳುಗುತ್ತವೆ ಎಂದು ಹೇಳಿದ್ದೆ. ಇನ್ನೂ ಮಳೆ ಇದೆ, ಅದರಲ್ಲಿ ಇನ್ನೂ ಅನಾಹುತಗಳಾಗಲಿವೆ. ಒಂದು ಆಕಾಶ ತತ್ವ ಪ್ರಕಾರ ತೊಂದರೆ ಆಗಬಹುದು. ಅದು ರಾಜನ ಮೇಲೆ ಭಂಗ ಬೀರಲಿದೆ ಎಂದು ಅವರು ಹೇಳಿದ್ದಾರೆ.
ಒಂದು ತಿಂಗಳ ಹಿಂದೆ ಕೂಡ ಕೋಡಿ ಶ್ರೀಗಳು ಪ್ರಕೃತಿ ಮತ್ತು ಸರ್ಕಾರಗಳಿಗೆ ಸಂಬಂಧಿಸಿ ಭವಿಷ್ಯ ನುಡಿದಿದ್ದರು. ದೇಶಕ್ಕೆ ದೊಡ್ಡ ಗಂಡಾಂತರ ಕಾದಿದೆ ಎಂದು ಜೂನ್ನಲ್ಲಿ ಭವಿಷ್ಯ ನುಡಿದಿದ್ದ ಕೋಡಿಮಠ ಶ್ರೀ, ತಮ್ಮ ಭವಿಷ್ಯ ನಿಜವಾಗಿದೆ ಎಂದು ಜುಲೈನಲ್ಲಿ ಹೇಳಿದ್ದರು. ಕರ್ನಾಟಕದ ವಿವಿಧೆಡೆ ಉಂಟಾದ ಪ್ರವಾಹ ಪರಿಸ್ಥಿತಿ ಹಾಗೂ ಕೇರಳದಲ್ಲಿ ಸಂಭವಿಸಿದ ದುರಂತದ ಬಗ್ಗೆ ಉಲ್ಲೇಖಿಸಿದ ಅವರು, ತಾವು ನುಡಿದಿದ್ದ ಭವಿಷ್ಯವನ್ನು ಸಮರ್ಥಿಸಿಕೊಂಡಿದ್ದರು. ತಮ್ಮ ಭವಿಷ್ಯ ನಿಜವಾಗಿದೆ ಎಂದಿದ್ದರು.