ಬೆಳಗಾವಿ : ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ವಿದೇಶಾಂಗ ಸಚಿವ ಎಸ್ ಎಂ ಕೃಷ್ಣ ಅವರು ತಡರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ನಾಳೆ ಅವರ ಹುಟ್ಟೂರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ. ಒಂದು ಅಂತ್ಯಕ್ರಿಯೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಎನ್ ಡಿಕೆ ಶಿವಕುಮಾರ್ ಸೇರಿದಂತೆ ಎಲ್ಲಾ ನಾಯಕರು ಭಾಗಿಯಾಗಲಿದ್ದಾರೆ.
ಈ ಕುರಿತು ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಎಸ್ಎಂ ಕೃಷ್ಣ ಅವರ ನಿಧಾನದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಅಲ್ಲದೇ ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆಯನ್ನು ಘೋಷಿಸಲಾಗಿದೆ. ಎಸ್ಎಮ್ ಕೃಷ್ಣ ಕಠಿಣ ಸವಾಲುಗಳನ್ನು ಸಹ ಜಾಣ್ಮೆಯಿಂದ ಬಗೆಹರಿಸಿದರು.
ಕುಟುಂಬ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ. ನಾನು ಎರಡು ತಿಂಗಳ ಹಿಂದೆ ಎಸ್ಎಂ ಕೃಷ್ಣ ಅವರನ್ನು ಭೇಟಿಯಾಗಿದ್ದೆ. ನಾಳೆ ಎಸ್ಎಂ ಕೃಷ್ಣ ಅಂತ್ಯಕ್ರಿಯೆಯಲ್ಲಿ ಭಾಗಿಯಾಗುತ್ತೇನೆ. ಎಸ್ಎಂ ಕೃಷ್ಣ ಪುತ್ಥಳಿ ನಿರ್ಮಾಣದ ಬಗ್ಗೆ ಚರ್ಚೆ ಮಾಡಿ ತೀರ್ಮಾನಿಸಲಾಗುತ್ತದೆ. ಎಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.