ನವದೆಹಲಿ : ಒಂದು ಕಡೆ ಸಿಎಂ ಸಿದ್ದರಾಮಯ್ಯನವರೇ ಮುಂದಿನ 10 ವರ್ಷಗಳ ಕಾಲ ಸಿಎಂ ಆಗಿರುತ್ತಾರೆ ಎಂದು ಕೆಲವು ಕಾಂಗ್ರೆಸ್ ನಾಯಕರು ಹೇಳುತ್ತಿದ್ದರೆ, ಇನ್ನೊಂದು ಕಡೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಲವು ರಾಜ್ಯಗಳ ಪಿಸಿಸಿ ಸ್ಥಾನ ಬದಲಾವಣೆ ಮಾಡಲಾಗುತ್ತದೆ ಎಂದು ಹೇಳಿಕೆ ನೀಡಿದ್ದಾರೆ. ಇದರ ಮಧ್ಯ ಸಹಕಾರ ಸಚಿವ ಕೆಎನ್ ರಾಜಣ್ಣ ಅವರು ಎಐಸಿಸಿ ಅಧ್ಯಕ್ಷರು ಹೇಳಿದರೆ ಕೆಪಿಸಿಸಿ ಅಧ್ಯಕ್ಷನಾಗುತ್ತೇನೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.
ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷರು ಹೇಳಿದರೆ ಕೆಪಿಸಿಸಿ ಅಧ್ಯಕ್ಷನಾಗುತ್ತೇನೆ. ಎಐಸಿಸಿ ಅಧ್ಯಕ್ಷರು ಹೇಳಿದರೆ ಮಂತ್ರಿ ಸ್ಥಾನ ಬಿಟ್ಟು ಕೆಪಿಸಿಸಿ ಅಧ್ಯಕ್ಷನಾಗುತ್ತೇನೆ. ಒನ್ ಮ್ಯಾನ್ ಒನ್ ಪೋಸ್ಟಿಗೆ ಬದ್ಧನಾಗಿರುತ್ತೇನೆ. ಸಿಎಂ ಘೋಷಣೆ ಮಾಡುವಾಗ ಪ್ರೆಸ್ ರಿಲೀಸ್ ಮಾಡಿದ್ದರು. ಎಂಪಿ ಚುನಾವಣೆಯ ವರೆಗೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಎಂದಿದ್ದರು. ಹೈಕಮಾಂಡ್ ಹೇಳಿದೆ ಅನ್ನೋ ಭಾವನೆ ಕಾರ್ಯಕರ್ತರಲ್ಲಿ ಇದೆ. ಅಧ್ಯಕ್ಷರ ಬದಲಾವಣೆ ಮಾಡಿ ಎಂದು ನಾನೇನು ಹೇಳುತ್ತಿಲ್ಲ. ಗೊಂದಲ ಬಗೆಹರಿಸಿ ಅನ್ನುವುದೇ ನಮ್ಮ ಬಯಕೆಯಾಗಿದೆ. ವಿಐಸಿಸಿ ನಾಯಕರು ಹೇಳಿದರೆ ಕೆಪಿಸಿಸಿ ಅಧ್ಯಕ್ಷನಾಗುತ್ತೇನೆ ಎಂದು ತಿಳಿಸಿದರು.
ಇನ್ನು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಬಿಡುಗಡೆ ಕೋರಿ ಪತ್ರ ಬರೆದಿದ್ದೇನೆ ನನ್ನ ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಮಾಡಬೇಕಿದೆ. ಹೀಗಾಗಿ ಉಸ್ತುವಾರಿ ಸಚಿವ ಸ್ಥಾನದಿಂದ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದೇನೆ. ಮುಂಬರುವ ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ಕೆಲಸ ಮಾಡಬೇಕಿದೆ. ನಾನು ಯಾವ ಜಿಲ್ಲೆಗೂ ಉಸ್ತುವಾರಿ ಕೊಡಿ ಎಂದು ಕೇಳುವುದಿಲ್ಲ. ಹಾಸನದಲ್ಲಿ ಲೋಕಸಭಾ ಅಭ್ಯರ್ಥಿಯನ್ನು ಗೆಲ್ಲಿಸುವ ಜವಾಬ್ದಾರಿ ಇತ್ತು. ನನ್ನ ಬಿಡುಗಡೆ ಮಾಡುವಂತೆ ಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷರಿಗೆ ಪತ್ರ ಬರೆದಿದ್ದೇನೆ ಎಂದು ಸಚಿವ ಕೆ ಎನ್ ರಾಜಣ್ಣ ತಿಳಿಸಿದರು.