ಮೈಸೂರು : ಚನ್ನಪಟ್ಟಣ ಉಪಚುನಾವಣೆಗೆ ಸಂಬಂಧಪಟ್ಟಂತೆ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಯಲ್ಲಿ ಅಭ್ಯರ್ಥಿಯ ಕುರಿತಂತೆ ಗೊಂದಲ ಮೂಡಿದ್ದು, ಇನ್ನೂ ಕೂಡ ಯಾವುದೇ ಅಭ್ಯರ್ಥಿ ಘೋಷಣೆ ಮಾಡಿಲ್ಲ ಆದರೆ ಚನ್ನಪಟ್ಟಣ ಬೈ ಎಲೆಕ್ಷನ್ ನಲ್ಲಿ ನಾನೇ ಸ್ಪರ್ಧಿಸುತ್ತೇನೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸ್ಪೋಟಕ ಹೇಳಿಕೆ ನೀಡಿದರು.
ಮೈಸೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ನಾವು ವ್ಯಕ್ತಿ ಮೇಲೆ ಚುನಾವಣೆ ಮಾಡಲ್ಲ. ಪಕ್ಷದ ಸಿದ್ಧಾಂತದ ಮೇಲೆ ಚುನಾವಣೆ ಮಾಡಲು ಹೊರಟಿದ್ದೇವೆ. ಚನ್ನಪಟ್ಟಣದಿಂದ ನಾನೇ ಸ್ಪರ್ಧಿಸುತ್ತೇನೆ. MP ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಹಿನ್ನಡೆ ಆಗಿತ್ತು. MLA ಚುನಾವಣೆಯಲ್ಲಿಯೂ ಹೆಚ್ಚು ಹಿನ್ನಡೆಯಾಗಿತ್ತು. ಈಗ ನಮ್ಮ ಬೇಸ್ ಸ್ಟ್ರಾಂಗ್ ಮಾಡುತ್ತಿದ್ದೇವೆ. ಜನ ಓಟ್ ಹಾಕಿ ಗೆಲ್ಲಿಸುತ್ತಾರೆಂಬ ನಂಬಿಕೆ ನನಗಿದೆ ಎಂದರು.