ಬೆಂಗಳೂರು : ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯವೊಂದು ನಡೆದಿದ್ದು, ಯುವತಿಯನ್ನ ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ.
23 ವರ್ಷದ ಯುವತಿಯನ್ನು ಕಿಡ್ನ್ಯಾಪ್ ಮಾಡಿ ಅತ್ಯಾಚಾರ ಎಸಗಿರುವ ಘಟನೆ ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ನಡೆದ ನೇಹಾ ಕೊಲೆ ಪ್ರಕರಣದ ಕಾವು ಆರುವ ಮುನ್ನವೇ ಬೆಂಗಳೂರಿನಲ್ಲಿ ಅತ್ಯಾಚಾರ ಪ್ರಕರಣ ವರದಿಯಾಗಿದೆ.
ಐತಿಹಾಸಿಕ ಕರಗ ಮಹೋತ್ಸವದ ಮೆರವಣಿಗೆಯಲ್ಲಿ ನಡೆದಿದ್ದ ಗಲಾಟೆಯಲ್ಲಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಮತ್ತೊಂದೆಡೆ ಯುವತಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆದಿದೆ.