ಬೆಂಗಳೂರು : ಮಹಿಳೆಯ ಅಪಹರಣ ಪ್ರಕರಣ ಸಂಬಂಧ ಇಂದು ಎಸ್ ಐಟಿ ಪೊಲೀಸರು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಸೇರಿದಂತೆ 7 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ಮಹಿಳೆಯ ಅಪಹರಣ ಸಂಬಂಧ ಎಸ್ ಐಟಿ ಅಧಿಕಾರಿಗಳು ಇಂದು ಬೆಂಗಳೂರಿನ ವಿಶೇಷ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದೆ.
ರೇವಣ್ಣ ಸೂಚನೆ ಮೇರೆಗೆ ಅಪಹರಣ ಮಾಡಲಾಗಿತ್ತು ಎಂದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದ್ದು, ರೇವಣ್ಣ ಪತ್ನಿ ಭವಾನಿ ರೇವಣ್ಣ ಪಾತ್ರದ ಬಗ್ಗೆಯೂ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ ಎನ್ನಲಾಗಿದೆ. ಮಹಿಳೆಯ ಅಪಹರಣ ಪ್ರಕರಣ ಸಂಬಂಧ ಎಸ್ ಐಟಿ ಮಾಜಿ ಸಚಿವ ಹೆಚ್.ಡಿ. ರೇವಣ್ಣರನ್ನು ಬಂಧಿಸಿತ್ತು.