ಮಂಡ್ಯ : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ಮುಂದುವರೆದಿದ್ದು, ಸಾಲ ಕಟ್ಟಲಾಗದೇ ಮಹಿಳೆಯೊಬ್ಬರು ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆಯ ಮಳವಳ್ಳಿಯ ಕೊನ್ನಾಪುರ ಗ್ರಾಮದ ಪ್ರೇಮಾ ಎಂಬ ಮಹಿಳೆ ಚನ್ನಪಟ್ಟಣದ ಉಜ್ಜೀವನ್ ಬ್ಯಾಂಕ್ ನಿಂದ 6 ಲಕ್ಷ ರೂ. ಸಾಲ ಪಡೆದಿದ್ದರು. ಸಾಲದ ಕಂತು ಕಟ್ಟದ ಹಿನ್ನೆಲೆಯಲ್ಲಿ ಉಜ್ಜೀವನ್ ಬ್ಯಾಂಕ್ ಸಿಬ್ಬಂದಿ ಮನೆಯನ್ನು ಸೀಜ್ ಮಾಡಿದ್ದರು. ಹೀಗಾಗಿ ನೋಂದ ಮಹಿಳೆ ಪ್ರೇಮಾ ಅವರು ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಪ್ರೇಮಾ ಅವರನ್ನು ಸದ್ಯ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸದ್ಯ ಮಂಡ್ಯದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪ್ರೇಮಾ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.