ಶಿವಮೊಗ್ಗ : ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಯುವತಿ ಒಬ್ಬಳು, ತೀವ್ರ ಅನಾರೋಗ್ಯದ ಹಿನ್ನೆಲೆಯಿಂದ ಬೇಸತ್ತಿದ್ದಾಳೆ. ಈ ವೇಳೆ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ನೇತಾಜಿ ವೃತ್ತದ ಬಳಿಯ ವಿಜಯನಗರದಲ್ಲಿ ಈ ಒಂದು ಘಟನೆ ನಡೆದಿದೆ.
ಹೌದು ಶಿವಮೊಗ್ಗದಲ್ಲಿ ಅನಾರೋಗ್ಯಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮನೆಯಲ್ಲಿ ನೇಣು ಬಿಗಿದುಕೊಂಡು ಸೌಮ್ಯ (25) ಎನ್ನುವ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.ಶಿವಮೊಗ್ಗದ ನೇತಾಜಿ ವ್ರತ ಬಳಿಯ ವಿಜಯನಗರದಲ್ಲಿ ಈ ಒಂದು ಘಟನೆ ನಡೆದಿದೆ.ಮೃತ ಯುವತಿ ಸೌಮ್ಯ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಳು.
ಕಳೆದ ಹಲವು ದಿನಗಳಿಂದ ಸೌಮ್ಯಳಿಗೆ ಉಸಿರಾಟದ ಸಮಸ್ಯೆ ಎದುರಾಗಿದ್ದು ಇದರಿಂದ ತೀವ್ರವಾಗಿ ಆರೋಗ್ಯ ಸಮಸ್ಯೆ
ಯನ್ನು ಎದುರಿಸಿದ್ದಳು. ಅನಾರೋಗ್ಯದಿಂದ ಬೇಸತ್ತು ಸೌಮ್ಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಘಟನೆ ಕುರಿತು ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.