ತುಮಕೂರು : ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ನಗರದಲ್ಲಿ ನಡೆದಿದೆ.
ತುಮಕೂರಿನ ಟೌನ್ ಹಾಲ್ ಸರ್ಕಲ್ ಬಳಿ ರಸ್ತೆ ದಾಟುತ್ತಿದ್ದ ವೇಳೆ ಕೆಎಸ್ ಆರ್ ಟಿಸಿ ಬಸ್ ಹರಿದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತ ಮಹಿಳೆಯನ್ನು ಮಂಜಮ್ಮ (45) ಎಂದು ಗುರುತಿಸಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತುಮಕೂರು ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.