ಬೆಂಗಳೂರು : ಪೋಷಕರ ವಿರೋಧದ ನಡುವೆಯೂ ಮದುವೆಯಾಗಿದ್ದ ಮಹಿಳೆಯೊಬ್ಬರು ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಮಾದನಾಯಕನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಸ್ಪಂದನಾ (24) ಅನುಮಾನಸ್ಪದವಾಗಿ ಮೃತಪಟ್ಟಿದ್ದಾರೆ.
ಪೋಷಕರ ವಿರೋಧದ ನಡುವೆಯೂ ಅಭಿಷೇಕ್ ಎಂಬಾತನ ಜೊತೆಗೆ ರಿಜಿಸ್ಟರ್ ಮ್ಯಾರೇಜ್ ಆಗಿದ್ದರು. ಸ್ಪಂದನಾ ಕಾಲೇಜಿಗೆ ಹೋಗುತ್ತಿದ್ ಸಮಯದಲ್ಲೇ ಪ್ರೀತಿಸಿ ಮದುವೆಯಾಗಿದ್ದರು.ಸದ್ಯ ಇದೀಗ ಅನುಮಾನಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.