ಬೆಳಗಾವಿ : ಬೆಳಗಾವಿಯಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು, ವಾಟರ್ ಹೀಟರ್ ಹಿಡಿದಾಗ ವಿದ್ಯುತ್ ಪ್ರವಹಿಸಿ ಮಹಿಳೆಯೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹೊಸೂರು ಗ್ರಾಮದಲ್ಲಿ ಈ ಒಂದು ದುರಂತ ಸಂಭವಿಸಿದೆ.
ಹೌದು ಹೊಸುರು ಗ್ರಾಮದಲ್ಲಿ ವಿದ್ಯುತ್ ಪ್ರವಹಿಸಿ ಮಹಿಳೆ ಸಾವನ್ನಪ್ಪಿದ್ದಾರೆ.ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹೊಸೂರು ಗ್ರಾಮದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.ವಿದ್ಯುತ್ ಪ್ರವಹಿಸಿ ರೇಖಾ, (52) ಮೃತ ದುರ್ದೈವಿ ಎಂದು ತಿಳಿದುಬಂದಿದೆ. ವಾಟರ್ ಹೀಟರ್ ಹಿಡಿದು ಕರೆಂಟ್ ಶಾಕ್ ನಿಂದ ಸಾವನ್ನಪ್ಪಿದ್ದಾರೆ. ಘಟನೆ ಕುರಿತಂತೆ ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.