ಗುಜರಾತ್ : ಕಳೆದ ಕೆಲವು ದಿನಗಳ ಹಿಂದೆ ರಾಜಸ್ಥಾನದಲ್ಲಿ 150 ಅಡಿ ಬೋರ್ವೆಲ್ ಗೆ ಬಿದ್ದಂತಹ ಬಾಲಕಿಯನ್ನು ಜೀವಂತವಾಗಿ ರಕ್ಷಿಸಲಾಗಿತ್ತು.ರಕ್ಷಣೆ ಮಾಡಿದಾಗ ಆಕೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದಳು. ತಕ್ಷಣ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಆ ಒಂದು ಬಾಲಕಿ ಸಾವನ್ನಪ್ಪಿದ್ದಳು. ಇದೀಗ ಅಂತದ್ದೇ ಘಟನೆ ಗುಜರಾತ್ ನಲ್ಲಿ ನಡೆದಿದ್ದು ಸುಮಾರು 540 ಕ್ಕೂ ಹೆಚ್ಚು ಅಡಿ ಆಳವಿರುವ ಬೋರ್ವೆಲ್ ಗೆ 18 ವರ್ಷದ ಯುವತಿ ಬಿದ್ದಿರುವ ಘಟನೆ ಗುಜರಾತ್ನ ಕಛ್ ಜಿಲ್ಲೆಯಲ್ಲಿ ನಡೆದಿದೆ.
ಹೌದು ಈ ಘಟನೆಯು ಗುಜರಾತ್ನ ಕಛ್ ಜಿಲ್ಲೆಯ ಭುಜ್ ತಾಲೂಕಿನ ಕಂಡೆರೈ ಗ್ರಾಮದಲ್ಲಿ ಬೆಳಗ್ಗೆ 6.30ರ ಸುಮಾರಿಗೆ ಈ ಘಟನೆ ನಡೆದಿದೆ.18 ವರ್ಷದ ಯುವತಿಯೊಬ್ಬಳು 540 ಅಡಿ ಆಳದ ಬೋರ್‌ವೆಲ್‌ಗೆ ಬಿದ್ದಿರುವ ಘಟನೆ ನಡೆದಿದೆ. 540 ಅಡಿ ಆಳದ ಕೊಳವೆಬಾವಿಯಲ್ಲಿ ಬಾಲಕಿ 490 ಅಡಿ ಆಳದಲ್ಲಿ ಸಿಲುಕಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆಕೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ಆಮ್ಲಜನಕ ಪೂರೈಸಲಾಗುತ್ತಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.
ರಾಜಸ್ಥಾನದಲ್ಲೂ ಇಂತದ್ದೇ ಘಟನೆ!
ಕಳೆದ ಡಿಸೆಂಬರ್ ನಲ್ಲಿ ರಾಜಸ್ಥಾನದಲ್ಲಿ 150 ಅಡಿ ಆಳದ ಬೋರ್‌ವೆಲ್‌ಗೆ ಬಿದ್ದ ಚೇತನಾ ಅವರನ್ನು ಜನವರಿ 1 ರಂದು ಪ್ರಜ್ಞಾಹೀನ ಸ್ಥಿತಿಯಲ್ಲಿ ಹೊರಗೆ ತರಲಾಯಿತು. ಆದರೆ, ಆಸ್ಪತ್ರೆಗೆ ಸಾಗಿಸುವಾಗ, ಅವರು ಸಾವನ್ನಪ್ಪಿದ್ದಳು.ಡಿಸೆಂಬರ್ 23 ರಂದು ಸರುಂಡ್ ಪೊಲೀಸ್ ಠಾಣಾ ವ್ಯಾಪ್ತಿಯ ಬಾಡಿಯಾಲಿ ಧಾನಿಯಲ್ಲಿರುವ ತನ್ನ ತಂದೆಯ ಕೃಷಿ ಜಮೀನಿನಲ್ಲಿ ಆಟವಾಡುತ್ತಿದ್ದಾಗ ಮಗು ಬೋರ್‌ವೆಲ್‌ಗೆ ಬಿದ್ದಿತ್ತು.
ಇದೀಗ ಗುಜರಾತ್ನ ಕಛ್ ಜಿಲ್ಲೆಯಲ್ಲಿ 18 ವರ್ಷದ ಯುವತಿಯೊಬ್ಬಳು 540 ಅಡಿ ಆಳದ ಬೋರ್‌ವೆಲ್‌ಗೆ ಬಿದ್ದಿರುವ ಘಟನೆ ನಡೆದಿದೆ. ರಕ್ಷಣಾ ಕಾರ್ಯ ನಡೆಸಲಾಗುತ್ತಿದೆ. ಭಾರತೀಯ ಸೇನೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ಗಡಿ ಭದ್ರತಾ ಪಡೆ ತಂಡಗಳು ಸ್ಥಳದಲ್ಲಿವೆ. ರಕ್ಷಣಾ ತಂಡ ಬಾಲಕಿಯ ಮೇಲೆ ನಿಗಾ ಇರಿಸಿದ್ದು, ಆಕೆಗೆ ಆಮ್ಲಜನಕ ಒದಗಿಸಿದೆ.