ಬೆಂಗಳೂರು : ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ತೆರಳುತ್ತಿದ್ದ ವೇಳೆ ಲಾರಿ ಹಾಗೂ ಟಿಟಿ ವಾಹನ ಮಧ್ಯ ಭೀಕರ ಅಪಘಾತ ಸಂಭವಿಸಿದೆ. ಈ ಒಂದು ಅಪಘಾತದಲ್ಲಿ ಬೆಂಗಳೂರು ಮಹಿಳೆ ಒಬ್ಬರು ಸಾವನ್ನಪ್ಪಿದ್ದು, ಇನ್ನೂಳಿದ ಐವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಮಧ್ಯಪ್ರದೇಶ ಕಟ್ನಾದಲ್ಲಿ ನಡೆದಿದೆ.
ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಬೆಂಗಳೂರಿನಿಂದ ಟಿಟಿ ವಾಹನದಲ್ಲಿ ತೆರಳುತ್ತಿದ್ದರು. ಮಾರ್ಗ ಮಧ್ಯೆ ಲಾರಿ ಹಾಗೂ ಟಿಟಿ ವಾಹನ ನಡುವೆ ಅಪಘಾತ ಸಂಭವಿಸಿದೆ. ಟಿಟಿ ವಾಹನದಲ್ಲಿದ್ದ ಮಹಿಳೆ ಮೃತಪಟ್ಟಿದ್ದಾರೆ. ಗಾಯಗೊಂಡ ಐವರನ್ನು ಮಧ್ಯಪ್ರದೇಶದ ಕಟನಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಗಾಯಾಳುಗಳನ್ನು ಬೆಂಗಳೂರಿಗೆ ಸ್ಥಳಾಂತರಿಸುವಂತೆ ಕುಟುಂಬಸ್ಥರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.