ಬೆಂಗಳೂರು : ಬೆಂಗಳೂರಿನ ಮಹಾಲಕ್ಷ್ಮಿ ಮೆಟ್ರೋ ನಿಲ್ದಾಣದಲ್ಲಿ ಬಳಿ ಅಪರಿಚಿತ ವಾಹನ ಒಂದು ಡಿಕ್ಕಿ ಹೊಡೆದ ಪರಿಣಾಮವಾಗಿ ಹಿಟ್ ಅಂಡ್ ರನ್ನಿಗೆ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಹಿಟ್ ಅಂಡ್ ರನ್ನಿಗೆ 62 ವರ್ಷದ ಆಶಾರಾಣಿ ಎನ್ನುವ ಮಹಿಳೆ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್ನಿಗೆ ಮಹಿಳೆ ಬಲಿಯಾಗಿದ್ದು ಮಹಾಲಕ್ಷ್ಮಿ ಲೇಔಟ್ ಮೆಟ್ರೋ ನಿಲ್ದಾಣ ಬಳಿ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಘಟನೆಯು ಬೆಳಗಿನ ಜಾವ5.40ಕ್ಕೆ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದ್ದು, ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿ ಆಶಾರಾಣಿ (62) ಮಹಿಳೆ ಸಾವನ್ನಪ್ಪಿದ್ದಾಳೆ.ಸ್ಥಳಕ್ಕೆ ಮಹಾಲಕ್ಷ್ಮಿ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.