ಕೋಲಾರ : ಮಹಿಳೆಯ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಭೀಕರವಾಗಿ ಕೊಲೆ ಮಾಡಲಾಗಿದ್ದು, ಅಲ್ಲದೆ ಅತ್ಯಾಚಾರ ನಡೆದಿರುವ ಶಂಕೆ ವ್ಯಕ್ತವಾಗುತ್ತಿದ್ದೂ, ಈ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ನಾಗಶೆಟ್ಟಿಹಳ್ಳಿಯಲ್ಲಿ ಈ ದುರ್ಘಟನೆ ನಡೆದಿದೆ.
ಇನ್ಮುಂದೆ ‘ಸರ್ಕಾರಿ ನೌಕರರಿಗೆ’ ಎರಡು ಮಕ್ಕಳು ‘ಕಡ್ಡಾಯ’ಕ್ಕೆ: ಸುಪ್ರೀಂ ಕೋರ್ಟ್ ಅನುಮೋದನೆ!
ಕೆಜಿಎಫ್ ತಾಲೂಕಿನ ಐಪಲಿ ಗ್ರಾಮದ ಮಂಜುಳಾ (28)ಕೊಲೆಗೆ ಈಡಾದ ದುರ್ದೈವಿ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಕೆಜಿಎಫ್ ಎಸ್ ಪಿ ಶಾಂತರಾಜು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮಹಿಳೆಯ ಶವವನ್ನು ಕೆಜಿಎಫ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿದು ಬಂದಿದೆ. ಬೇತಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಪಾಕ್ ಪರಮಾಣು ಕಾರ್ಯಕ್ರಮಕ್ಕೆ ಉಪಕರಣಗಳನ್ನು ಸಾಗಿಸುತ್ತಿದ್ದ ಶಂಕಿತ ಹಡಗು ಮುಂಬೈನಲ್ಲಿ ವಶ: DRDO ವರದಿ