ರಾಮನಗರ : ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಆರೋಪದ ಅಡಿ ಈಗಾಗಲೇ ನ್ಯಾಯಾಂಗ ಬಂಧನದಲ್ಲಿರುವ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದ್ದು, ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ರಾಮನಗರ ಠಾಣೆಗೆ ಮಹಿಳೆಯೊಬ್ಬರು ದೂರು ನೀಡಲು ಮುಂದಾಗಿದ್ದಾರೆ.
ಹೌದು ದೂರು ನೀಡಲು ಆಗಮಿಸಿರುವ ಬೆಂಗಳೂರು ಮೂಲದ ಮಹಿಳೆ ರಾಮನಗರ ಪೊಲೀಸ್ ಠಾಣೆಗೆ ದೂರು ನೀಡಲು ಆಗಮಿಸಿದ್ದಾಳೆ. ಮಹಿಳೆಯರ ಜೊತೆ ಮುನಿರತ್ನ ನಾಯ್ಡು ಅನುಚಿತ ವರ್ತನೆ ಆರೋಪ ಕೇಳಿ ಬಂದಿದ್ದು, ಡಿವೈಎಸ್ಪಿ ಕಚೇರಿಯಲ್ಲಿ ಮಹಿಳೆಯ ಜೊತೆ ಪೊಲೀಸರು ಮಾತುಕತೆ ನಡೆಸುತ್ತಿದ್ದಾರೆ.
ಮಹಿಳೆಯ ಜೊತೆ ಮುನಿರತ್ನ ನಾಯ್ಡು, ಅನುಚಿತವಾಗಿ ವರ್ತನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು ಡಿವೈಎಸ್ಪಿ ಕಚೇರಿಯಲ್ಲಿ ಮಹಿಳೆಯ ಜೊತೆ ಪೊಲೀಸರು ಸದ್ಯ ಮಾತುಕತೆ ನಡೆಸುತ್ತಿದ್ದಾರೆ. ಶಾಸಕ ಮುನಿರತ್ನ ನಾಯ್ಡು ವಿರುದ್ಧ ದೂರು ಸ್ವೀಕರಿಸುವಂತೆ ಮಹಿಳೆ ಪೊಲೀಸರಿಗೆ ಮನವಿ ಮಾಡಿದ್ದಾರೆ.ಸದ್ಯ ಕಗ್ಗಲೀಪುರ ಪೊಲೀಸ್ ಠಾಣೆಗೆ ರಾಮನಗರ ಪೊಲೀಸರು ಮಹಿಳೆಯನ್ನು ಕರೆದುಕೊಂಡು ಹೋಗಿದ್ದಾರೆ ಎಂದು ತಿಳಿದುಬಂದಿದೆ.