ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ಟೆಕ್ಕಿ ಅತುಲ್ ಸುಭಾಷ್ ಪತ್ನಿಯ ಕಿರುಕುಳಕ್ಕೆ ಮನನೊಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದರು. ಈ ಒಂದು ಘಟನೆ ಮಾಸುವ ಮುನ್ನವೇ ಇಂದು ಬೆಂಗಳೂರಿನಲ್ಲಿ ಮತ್ತೋರ್ವ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಲ್ಲಸಂದ್ರದಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾಗಿರುವ ಯುವತಿಯನ್ನು ರುಚಿತಾ (25) ಎಂದು ತಿಳಿದು ಬಂದಿದೆ. ರುಚಿತಾ ಬಯೋಕಾನ್ ಕಂಪನಿಯ ಜೂನಿಯರ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡುತ್ತಿದ್ದಳು. ಬೆಂಗಳೂರಿನ ಮಲ್ಲಸಂದ್ರದಲ್ಲಿ ಮನೆಯಲ್ಲಿ ನೇಣು ಬಿಗಿದುಕೊಂಡು ರುಚಿತ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆತ್ಮಹತ್ಯೆ ಮಾಡಿಕೊಂಡ ರುಚಿತ ಮೂಲತಃ ಆಂಧ್ರದ ಅನಂತಪುರ ಜಿಲ್ಲೆಯ ಬೆಸ್ತರಹಳ್ಳಿ ನಿವಾಸಿ ಎಂದು ತಿಳಿದು ಬಂದಿದ್ದು, ಘಟನೆ ಸಂಬಂಧ ಬಾಗಲಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆತ್ಮಹತ್ಯೆ ಮಾಡಿಕೊಂಡ ರುಚಿತಾ ತಂದೆ ತಾಯಿ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಮಗಳು ಫೋನ್ ಕಾಲ್ ರಿಸೀವ್ ಮಾಡದ ಹಿನ್ನೆಲೆಯಲ್ಲಿ ಅನುಮಾನ ಕೊಂಡು ಮನೆಗೆ ಆಗಮಿಸಿದ್ದಾರೆ. ಈ ವೇಳೆ ಮಗಳು ರುಚಿತ ಸೀಲಿಂಗ್ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪ್ರಕರಣವನ್ನು ದಾಖಲಿಸಿಕೊಂಡ ಬಾಗಲಕುಂಟೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.