ಚಾಮರಾಜನಗರ : ಹೂತುಹಾಕಿದ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ಚಾಮರಾಜನಗರದ ಸುವರ್ಣಾವತಿ ಹೊಳೆದಂಡೆಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ. ಕೊಳ್ಳೆಗಾಲದ ಹಳೇಹಂಪಾಪುರ ಬಳಿಯಲ್ಲಿರುವ ಸುವರ್ಣಾವತಿ ಹೊಳೆ ದಂಡೆಯಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.