ಬೆಂಗಳೂರು : ಬೆಂಗಳೂರಿನ ಸೋಲದೇವನಹಳ್ಳಿಯಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಕೊಳತೆ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ.
ಬೆಂಗಳೂರಿನ ಸೋಲದೇವನಹಳ್ಳಿಯಲ್ಲಿರುವ ನಿರ್ಮಾಣ ಹಂತದ ಕಟ್ಟಡವೊಂದರ ನೀರಿನ ಸಂಪ್ ನಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು, ಮಹಿಳೆಗೆ 35 ವರ್ಷ ವಯಸ್ಸು ಎಂದು ಅಂದಾಜಿಸಲಾಗಿದೆ.
ಮಹಿಳೆ ಕೈ ಮೇಲೆ ‘ಚಂದ್ರಮ್ಮ’ ಎಂಬ ಹೆಸರಿನ ಟ್ಯಾಟೂ ಇದ್ದು, ಮೃತ ಮಹಿಳೆಯ ಗುರುತು ಪತ್ತೆಯಾಗಿಲ್ಲ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.