ಬೆಂಗಳೂರು : ಬೆಂಗಳೂರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಿನ ಯಶವಂತಪುರ ರೈಲ್ವೆ ನಿಲ್ದಾಣದ ಬಳಿ ಇರುವ ಖಾಲಿ ಜಾಗದಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು, ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಮಹಿಳೆ ಶವವನ್ನು ಪ್ಲ್ಯಾಸ್ಟಿಕ್ ಚೀಲದಲ್ಲಿ ಹಾಕಿಕೊಂಡು ಬಂದು ಖಾಲಿ ಜಾಗದಲ್ಲಿ ದುಷ್ಕರ್ಮಿಗಳು ಸುಟ್ಟು ಹಾಕಿದ್ದಾರೆ ಎಂದು ಶಂಕಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.