ಹೈದ್ರಾಬಾದ್ : ಸಂಧ್ಯಾ ಥಿಯೇಟರ್ ಬಳಿ ಪುಷ್ಪ 2 ಸಿನಿಮಾ ವೀಕ್ಷಣೆ ಮಾಡಲು ಬಂದಿದ್ದ ವೇಳೆ ಕಾಲ್ತುಳಿತದಲ್ಲಿ ಮಹಿಳೆ ಒಬ್ಬರು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಹೈದರಾಬಾದ್ ನ ಚಿಕ್ಕಡಪಲ್ಲಿಯಲ್ಲಿ ನಟ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಇದೀಗ ನಟ ಅಲ್ಲು ಅರ್ಜುನ್ ಅವರನ್ನು ಬಂಧಿಸಿದಂತೆ ಹೈಕೋರ್ಟಿಗೆ ಅರ್ಜಿ ಸಲ್ಲಿಸಲಾಗಿದೆ. ಸೋಮವಾರದವರೆಗೆ ಸ್ಪಂದಿಸದಂತೆ ಅರ್ಜಿ ಸಲ್ಲಿಸಲಾಗಿದೆ. ಸದ್ಯ ಪೋಲೀಸರು ಅಲ್ಲು ಅರ್ಜುನ್ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ವೈದ್ಯಕೀಯ ಪರೀಕ್ಷೆ ನಡೆಯಲಿದೆ ಬಳಿಕ ಅಲ್ಲಿಂದ ನೇರವಾಗಿ ಕೋರ್ಟಿಗೆ ಪೊಲೀಸರು ಅವರನ್ನು ಹಾಜರುಪಡಿಸಲಿದ್ದಾರೆ.