ಮೈಸೂರು : ಈ ಬಾರಿಯೂ ಅಭಿಮನ್ಯು ದಸರಾ ಜಂಬೂಸವಾರಿಯಲ್ಲಿ ಅಂಬಾರಿ ಹೊರಲಿದ್ದು, ಆಗಸ್ಟ್ 4ರ ಇಂದು ಹುಣಸೂರು ಬಳಿಯ ವೀರನಹೊಸಳ್ಳಿಯಿಂದ ವಿಧ್ಯುಕ್ತವಾಗಿ ಗಜಪಯಣಕ್ಕೆ ಚಾಲನೆ ನೀಡಲಾಗುವುದು.
ಮೈಸೂರು ದಸರಾ ಮಹೋತ್ಸವ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲು ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ದುಬಾರೆ ಆನೆ ಶಿಬಿರದಿಂದ ಭಾನುವಾರ 4 ಆನೆಗಳನ್ನು ಹುಣಸೂರು ಬಳಿಯ ವೀರನಹೊಸಹಳ್ಳಿ ಶಿಬಿರಕ್ಕೆ ಲಾರಿಗಳಲ್ಲಿ ಸಾಗಿಸಲಾಯಿತು. ಧನಂಜಯ, ಕಂಜನ್, ಪ್ರಶಾಂತ ಮತ್ತು ಕಾವೇರಿ ಆನೆಗಳನ್ನು ಇಲಾಖೆಯ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ವಿಶೇಷ ಪೂಜೆ ಸಲ್ಲಿಸಿ ಕಳುಹಿಸಲಾಯಿತು. ಇಂದು ವೀರನಹೊಸಹಳ್ಳಿಯಿಂದ ಆನೆಗಳ ಮೊದಲ ತಂಡ ಮೈಸೂರಿಗೆ ತೆರಳಲಿದೆ.
ಈ ಬಾರಿಯ ಜಂಬೂಸವಾರಿಯಲ್ಲಿ ಮತ್ತೀಗೋಡು ಶಿಬಿರದ ಭೀಮ (25 ವರ್ಷ), ದುಬಾರೆ ಶಿಬಿರದ ಕಂಜನ್ (24), ಧನಂಜಯ (44) ಮತ್ತು ಪ್ರಶಾಂತ್ (53), ಬಳ್ಳೆ ಶಿಬಿರದ ಮಹೇಂದ್ರ (42), ದೊಡ್ಡಹರವೆ ಶಿಬಿರದ ಏಕಲವ್ಯ (40) ಗಂಡಾನೆಗಳು ಹಾಗೂ ದುಬಾರೆ ಶಿಬಿರದ ಕಾವೇರಿ (45) ಹಾಗೂ ಬಳ್ಳೆಯ ಲಕ್ಷ್ಮೀ (53) ಹೆಣ್ಣಾನೆಗಳು ಮೊದಲ ಹಂತದಲ್ಲಿ ಮೈಸೂರಿಗೆ ಆಗಮಿಸಲಿವೆ