ಯಾದಗಿರಿ : ಹೊಸ ವರ್ಷಾಚರಣೆಯ ಸಂಭ್ರಮದ ಹೊತ್ತಲ್ಲೇ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನಲ್ಲಿ ಭೀಕರ ವಾದಂತಹ ಕೊಲೆಯಾಗಿದ್ದು, ಚಾಕುವಿನಿಂದ ಕತ್ತು ಕೊಯ್ದು ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮಾಚಗುಂಡಾಳ್ ಎಂಬ ಗ್ರಾಮದಲ್ಲಿ ನಡೆದಿದೆ.
ಹೌದು ಚಾಕುವಿನಿಂದ ಕತ್ತು ಕೊಯ್ದು ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಯಾದಗಿರಿ ಜಿಲ್ಲೆಯಸುರಪುರ ತಾಲೂಕಿನ ಮಾಚಗುಂಡಾಳ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ. ಗ್ರಾಮದ ಶರಣಪ್ಪ ಮೇಟಿ (28) ಎನ್ನುವ ವ್ಯಕ್ತಿಯ ಬರ್ಬರ ಕೊಲೆಯಾಗಿದೆ.ಶರಣಪ್ಪಗೆ ಚಾಕುವಿನಿಂದ ಮನಬಂದಂತೆ ಇರಿದು ಕತ್ತು ಕೊಯ್ದು ಕೊಲೆ ಮಾಡಲಾಗಿದೆ.
ಕೊಲೆಯ ಬಳಿಕ ಕುತ್ತಿಗೆ ಬಳಿಗೆ ಚಾಕು ಬಿಟ್ಟು ಪಾತಕಿಗಳು ಅಲ್ಲಿಂದ ಪರಾರಿಯಾಗಿದ್ದಾರೆ. ಅನೈತಿಕ ಸಂಬಂಧವೇ ಈ ಒಂದು ಕೊಲೆಗೆ ಕಾರಣ ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಘಟನೆ ಕುರಿತಂತೆ ಸುರಪುರ ಠಾಣೆ ಪೊಲೀಸರು, ಪ್ರಕರಣವನ್ನು ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.