ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆ ಆಗುತ್ತಿದ್ದು ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನೂ ಎರಡು ದಿನಗಳ ಕಾಲ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಈ ನೆಲೆಯಲ್ಲಿ ಬೆಂಗಳೂರು ಸೇರಿದಂತೆ 13 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ತಮಿಳುನಾಡಿನ ಕರಾವಳಿ ತೀರದಲ್ಲಿ ಗಾಳಿ ಪರಿಚಲನೆ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ 13 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಜ್ಞ ಸಿ ಎಸ್ ಪಾಟೀಲ್ ಈ ಕುರಿತು ಮಾಹಿತಿ ನೀಡಿದರು.
ಬೆಳಗಾವಿ, ಧಾರವಾಡ, ಹಾವೇರಿ, ಗದಗ,b ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು, ರಾಮನಗರ ಹಾಗೂ ಮಂಡ್ಯ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಲ್ಲದೆ ಮುಂದಿನ ಮೂರು ಗಂಟೆಗಳ ಕಾಲ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಹಾಗಾಗಿ ಬೆಂಗಳೂರಿಗೆ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.