ಚಿಕ್ಕಮಗಳೂರು : ಎನ್ ಆರ್ ಐ ವೈದ್ಯೆ ಮೇಲೆ ಅತ್ಯಾಚಾರ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಯೋಗ ಗುರು ಪ್ರದೀಪ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಮಲ್ಲೇನಹಳ್ಳಿಯಲ್ಲಿರುವ ಕೇವಲ ಆಶ್ರಮದಲ್ಲಿ ತಮ್ಮ ಮೇಲೆ ಅತ್ಯಾಚಾರ ನಡೆದಿದೆ ಎಂದು ಆರೋಪಿಸಿ ಎನ್ ಆರ್ ವೈದ್ಯೆಯೊಬ್ಬರು ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ್ದು, ಈ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಯೋಗಗುರು ಪ್ರದೀಪ್ ನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.
3 ತಿಂಗಳ ಹಿಂದೆ ಆಶ್ರಮಕ್ಕೆ ಯೋಗ, ಧ್ಯಾನ ಕಲಿಯಲು ಬಂದಿದ್ದ ಅಮೆರಿಕ ಪೌರತ್ವ ಪಡೆದಿರುವ ಪಂಜಾಬ್ ಮೂಲದ ಮಹಿಳಾ ವೈದ್ಯೆ ಮೇಲೆ ಪ್ರದೀಪ್ ಅತ್ಯಾಚಾರ ನಡೆಸಲಾಗಿದ್ದು, ಅತ್ಯಾಚಾರ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಆರೋಪಿಯನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.