ಬೆಂಗಳೂರು : ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧ ಶಾಸಕ ವಿನಯ್ ಕುಲಕರ್ಣಿಯನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ವಿನಯ್ ಕುಲಕರ್ಣಿ ಜಾಮೀನು ರದ್ದಾಗಿದೆ. ಯೋಗೇಶ್ ಕೊಲೆ ಪ್ರಕರಣ ಸಂಬಂಧ ಕೋರ್ಟ್ ಸೂಚನೆಗೆ ಮೇರೆಗೆ ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ವಿಚಾರಣೆ ಬಳಿಕ ಪರಪ್ಪನ ಅಗ್ರಹಾರಕ್ಕೆ ತೆರಳಲಿದ್ದಾರೆ ಎನ್ನಲಾಗಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರಾಗಲು ಬಂದಿದ್ದ ವಿನಯ್ ಕುಲಕರ್ಣಿ ಅವರು, ಕೋರ್ಟ್ ಗೆ ಹಾಜರಾಗುತ್ತಿದ್ದಂತೆ ಸಿಬಿಐ ಅವರನ್ನು ವಶಕ್ಕೆ ಪಡೆದಿದೆ.