ಬೆಂಗಳೂರು : ಪರ್ಪನ ಅಗ್ರಹಾರ ಜಾಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ನಾನು ನೀವು ಕೊಡುವ ಅಂಕಿ-ಅಂಶಗಳ ಡೇಟಾ ನೋಡಲು ಬಂದಿಲ್ಲ. ರಾಷ್ಟ್ರಮಟ್ಟದಲ್ಲಿ ಇಲಾಖೆಯ ಮರ್ಯಾದೆ ಹರಾಜು ಹಾಕಿದ್ದೀರಿ ಎಂದು ಕಾರಾಗೃಹ ಅಧಿಕಾರಿಗಳ ಮೇಲೆ ಗೃಹಸಚಿವ ಡಾ.ಜಿ.ಪರಮೇಶ್ವರ್ ಕೆಂಡಾ ಮಂಡಲವಾಗಿದ್ದಾರೆ.
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಕೈದಿಗಳಿಗೆ ವಿಶೇಷ ಸೌಲಭ್ಯ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳ ಜತೆ ನಿನ್ನೆ ಸಚಿವರು ಸಭೆ ನಡೆಸಿದರು. ಈ ಸಭೆಯಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಅಧಿಕಾರಿಗಳನ್ನು ಸಚಿವರು ಹಿಗ್ಗಾಮುಗ್ಗಾ ಜಾಡಿಸಿದ್ದಾರೆ ಎಂದು ತಿಳಿದು ಬಂದಿದೆ. ನಾನು ನೀವು ಕೊಡುವ ಅಂಕಿ-ಅಂಶಗಳ ಡೇಟಾ ನೋಡಲು ಬಂದಿಲ್ಲ. ರಾಷ್ಟ್ರಮಟ್ಟದಲ್ಲಿ ಇಲಾಖೆಯ ಗೌರವ ಹಾಳಾಗಿದೆ. ಈಗ ಬಂದು ಹಳೇ ವಿಡಿಯೋ ಎಂದು ಸಬೂಬು ಹೇಳುತ್ತಿದ್ದೀರಿ. 2023ರಲ್ಲಾಯ್ತು, 2024ರಲ್ಲಾಯ್ತು ಅಂತ ಹೇಳ್ತಿರಿ. ಆಗ ಯಾಕಾಯ್ತು ಅಂತ ಉತ್ತರ ಕೊಡಿ ಎಂದು ಅಧಿಕಾರಿಗಳಿಗೆ ಖಾರವಾಗಿ ಪ್ರಶ್ನಿಸಿದರು.
ಜೈಲುಗಳಲ್ಲಿ ಶೋಧ ಕಾರ್ಯ ನಡೆಸಿದಾಗ ಏನೂ ಸಿಕ್ಕಿಲ್ಲ ಅಂತ ಹೇಳ್ತಿರಿ. ಈಗ ಅದೆಲ್ಲ ಹೇಗೆ ಒಳಗಡೆ ಹೋಯ್ತು. ನಿಮಗೆ ನಾಚಿಕೆ ಆಗೋದಿಲ್ಲವೇ? 2023ರ ಜೂನ್-ಜುಲೈ ನಲ್ಲಿ ಜೈಲು ಸೂಪರಿಂಟೆಂಡೆಂಟ್ ಯಾರು ಇದ್ದರು? ರೌಡಿ ನಾಗ ತಾನೇ ವೀಡಿಯೋ ರೆಕಾರ್ಡ್ ಮಾಡಿ ಆತನಿಗೆ ರುವುದಾಗಿ ಪ್ರಕರಣವೊಂದರಲ್ಲಿ ಒಪ್ಪಿಕೊಂಡಿದ್ದಾನೆ. ಎರಡು ಮೊಬೈಲ್‌ಗಳು ಹೇಗೆ ಸಿಕ್ಕಿತು? ಲಿಕ್ಕರ್, ಫೋನ್, ಪೆನ್ ಕ್ಯಾಮೆರಾ ಹೇಗೆ ಹೋಯ್ತು ಎಂದು ಸಚಿವರು ಖಾರವಾಗಿ ಕೇಳಿದರು ಎನ್ನಲಾಗಿದೆ.
ಜೈಲಿನಲ್ಲಿ ನಿಷೇಧಿತ ವಸ್ತುಗಳಿಗೆ ನಿರ್ಬಂಧಿಸಿದ್ದರೆ ಈ ರಗಳೆ ಎಲ್ಲ ಇರುತ್ತಿರ ಲಿಲ್ಲ. ಆದರೆ ನಿಮ್ಮ ಅಸಮರ್ಥ ಕಾರ್ಯನಿರ್ವಹಣೆ ಪರಿಣಾಮ ಮೊಬೈಲ್, ಸಿಗರೇಟು ಹೀಗೆ ಎಲ್ಲವೂ ಕೈದಿಗಳಿಗೆ ಸಿಗುವಂತಾಗಿದೆ. ಒಂದೇ ಪ್ರವೇಶ ದ್ವಾರದಲ್ಲಿ ಏನೆಲ್ಲ ಹೋಗುತ್ತೆ? ಏನು ಹೋಗಲ್ಲ ಅನ್ನುವುದನ್ನು ಗುರುತಿಸಲು ಆಗುವುದಿಲ್ಲವೇ? ಇದರಲ್ಲಿ ಅಧಿಕಾರಿಗಳ ಕೈವಾಡ ಇಲ್ಲವೇ ನೀವೇ ಹೇಳಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.








