ಕಲಬುರ್ಗಿ : ಇತ್ತೀಚಿಗೆ ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದೆ. ಇದೀಗ ಯುವ ರೈತನೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರ್ಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಕಲಮೂಡ ಗ್ರಾಮದ ಯುವ ರೈತ ಓಂಕಾರ ಚಂದ್ರಪ್ಪ ಬಿರಾದಾರ (24) ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪಕ್ಕದ ಗಿಡಕ್ಕೆ ಸೋಮವಾರ ರಾತ್ರಿ ನೇಣು ಬಿಗಿದುಕೊಂಡಿದ್ದಾರೆ. ಬೆಳಿಗ್ಗೆ ನೋಡಿದ ಸಾರ್ವಜನಿಕರು ಕುಟುಂಬಸ್ಥರಿಗೆ ತಿಳಿಸಿದ್ದಾರೆ. ಓಂಕಾರ ತಾಯಿ ಹೆಸರಿನಲ್ಲಿ 3 ಎಕರೆ ಜಮೀನಿದೆ. ಕಮಲಾಪುರ ಕೆನರಾ ಬ್ಯಾಂಕಿನಲ್ಲಿ ₹1.25 ಲಕ್ಷ ಸಾಲವಿದೆ. ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.