ಕಲಬುರ್ಗಿ : ಕಲಬುರ್ಗಿಯಲ್ಲಿ ಘೋರ ದುರಂತ ನಡೆದಿದ್ದು, ಎರಡು ತಿಂಗಳ ಹಿಂದೆಯಷ್ಟೇ ವಿವಾಹ ಆಗಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡಿರು ಘಟನೆ ನಗರದ ದುಬೈ ಕಾಲೋನಿಯಲ್ಲಿ ನಡೆದಿದೆ.
ತವರು ಮನೆಯಲ್ಲಿ ನೇಣು ಬಿಗಿದುಕೊಂಡು ಭಾಗ್ಯಶ್ರೀ (19) ಎಂಬ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪತಿ ಮತ್ತು ಅವರ ಮನೆಯವರ ಕಿರುಕುಳ ಬಗ್ಗೆ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸಚಿನ್ ಎಂಬಾತನನ್ನು ಪ್ತಿತಿಸಿ 2 ತಿಂಗಳ ಹಿಂದೆಯಷ್ಟೇ ಮದುವೆ ಆಗಿದ್ದಳು.ಕುಟುಂಬಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಯುವತಿ ಪೋಷಕರು ಆಗ್ರಹಿಸಿದ್ದಾರೆ.








