ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಪುಂಡರ ಅಟ್ಟಹಾಸ ಹೆಚ್ಚಾಗಿದ್ದು, ಕಾಡುಗೋಡಿಯಲ್ಲಿ ನಡುರಸ್ತೆಯಲ್ಲೇ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ತಡರಾತ್ರಿ ಎಣ್ಣೆ ಪಾರ್ಟಿ ಮಾಡುತ್ತಿದ್ದಾಗ ಸಿಗರೇಟ್ ವಿಚಾರವಾಗಿ ಸ್ನೇಹಿತನೊಂದಿಗೆ ಕಿರಿಕ್ ತೆಗೆದುಕೊಂಡ ಪುಂಡರು ನಡು ರಸ್ತೆಯಲ್ಲೇ ಯುವಕನಿಗೆ ಕೈಗೆ ಸಿಕ್ಕ ದೊಣ್ಣೆ, ಬೆಲ್ಟ್, ಕಲ್ಲು ಹಾಗೂ ಕ್ರೇಡ್ ಮೂಲಕ ಹಲ್ಲೆ ಮಾಡಿದ್ದಾರೆ.
ಸದ್ಯ ಕಾಡುಗೋಡಿ ಪೊಲೀಸರು ಯುವಕನ ಮೇಲೆ ಹಲ್ಲೆ ನಡೆಸಿದ ಏಳು ಆರೋಪಿಗಳನ್ನು ಬಂಧಿಸಿದ್ದಾರೆ. ಕಾಡುಗೋಡಿ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.