ಮೈಸೂರು : ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನೊಬ್ಬ ತನ್ನ ಇನ್ನೊಬ್ಬ ಸ್ನೇಹಿತನ ಮೇಲೆ ಬಿಯರ್ ಬಾಟಲ್ ನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ, ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಕಾಡನಕೊಪ್ಪಲು ಬಳಿ ಈ ಘಟನೆ ನಡೆದಿದೆ.
ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ. ಅನಿಲ್ ಎಂಬುವನ ಮೇಲೆ ಬಿಯರ್ ಬಾಟಲಿಂದ ಅಭಿ ಎಂಬಾತ ಹಲ್ಲೆ ನಡೆಸಿದ್ದಾನೆ. ಅನಿಲ್ ಮೇಲೆ ಬಿಯರ್ ಬಾಟಲ್ ನಿಂದ ಸ್ನೇಹಿತ ಅಭಿ ಭೀಕರವಾಗಿ ಹಲ್ಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ. ವಾಹನದ ಸರ್ವಿಸ್ ಸೆಂಟರ್ ನಲ್ಲಿ ಹಲ್ಲೆ ನಡೆಸಿದ್ದಾನೆ.
ಅನಿಲ್ ಕತ್ತು ಹಾಗೂ ಬೆನ್ನು ಹೊಟ್ಟೆಗೆ ಬಿಯಟ್ ಬಾಟಲ್ ನಿಂದ ಹಲ್ಲೆ ನಡೆಸಿದ್ದಾನೆ. ಬಳಿಕ ಆರೋಪಿ ಅಭಿ ಹಲ್ಲೆ ನಡೆಸಿದ ನಂತರ ಪರಾರಿಯಾಗಿದ್ದಾನೆ. ಹಲ್ಲೆಗೊಳಗಾದ ಅನಿಲನನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಣಸೂರು ಟೌನ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.