ಯಾದಗಿರಿ : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಜನರು ಸರಣಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ ಇದೀಗ ಯಾದಗಿರಿ ಜಿಲ್ಲೆಯಲ್ಲಿ ಮೀಟರ್ ಬಡ್ಡಿ ದಂಧೆ ಕೋರನ ಕಿರುಕುಳಕ್ಕೆ ಬೇಸತ್ತು ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ.
ಹೌದು ನೇಣು ಬಿಗಿದುಕೊಂಡು ಯುವಕ ಅಂಜಪ್ಪ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಅಂಜಪ್ಪ ಸೂಸೈಡ್ ಗೆ ಯತ್ನಿಸಿದ್ದಾನೆ. ಕೂಡಲೇ ಆತನನ್ನು ಸ್ಥಳೀಯರು ರಕ್ಷಿಸಿದ್ದಾರೆ. ಯಾದಗಿರಿಯ ಸ್ವಾಮಿ ವಿವೇಕಾನಂದರ ನಗರದಲ್ಲಿ ಈ ಒಂದು ಘಟನೆ ನಡೆದಿದೆ.
ಮೀಟರ್ ಬಡ್ಡಿ ದಂಧೆಗೆ ಯುವಕ ನೊಂದು ಆತ್ಮಹತ್ಯೆ ಯತ್ನಿಸಿದ್ದಾನೆ. ಮೌನೇಶ್ ಎಂಬ ವ್ಯಕ್ತಿ ಅವಳಿ ಅಂಜಪ್ಪ 10,000 ಸಾಲವನ್ನು ಪಡೆದಿದ್ದ ಈ ವೇಳೆ ಹತ್ತು ಸಾವಿರಕ್ಕೆ ಅಸಲು ಮೀಟರ್ ಬಡ್ಡಿ ನೀಡುವಂತೆ ಕಿರುಕುಳ ನೀಡುತ್ತಿದ್ದರಿಂದ ನೊಂದ ಅಂಜಪ್ಪ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.