ಹುಬ್ಬಳ್ಳಿ : ಕಾಂಗ್ರೆಸ್ ಕಚೇರಿ ಮುಂದೆ ವ್ಯಕ್ತಿಯ ಬರಬರ ಕೊಲೆ ಮಾಡಲಾಗಿದ್ದು, ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯ ಮುಂದೆ ವ್ಯಕ್ತಿ ಒಬ್ಬನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಭೀಕರವಾಗಿ ಕೊಲೆ ಗೈಯಲಾಗಿದೆ.
ಕಾಂಗ್ರೆಸ್ ಕಚೇರಿಯ ಮುಂದೆ 28 ವರ್ಷದ ಯುವಕನನ್ನು ಹತ್ಯೆ ಮಾಡಲಾಗಿದ್ದು, ರಾತ್ರಿ ಸ್ನೇಹಿತರೆಲ್ಲರೂ ಸೇರಿ ಪಾರ್ಟಿ ಮಾಡಿ ಹತ್ಯೆಗೈದಿರುವ ಶಂಕೆ ವ್ಯಕ್ತವಾಗುತ್ತಿದೆ. ತಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಘಟನೆ ಕುರಿತಂತೆ ಹಳೆ ಹುಬ್ಬಳ್ಳಿ ಪೊಲೀಸ್ ಠಾಣಾದಲ್ಲಿ ಪ್ರಕರಣ ದಾಖಲಾಗಿದೆ.