ಕಲಬುರ್ಗಿ : ಇತ್ತೀಚಿಗೆ ರಾಜ್ಯದಲ್ಲಿ ಕ್ಷುಲ್ಲಕ ಕಾರಣಕ್ಕೆ ಕೊಲೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿವೆ. ಇದೀಗ ಕಲ್ಬುರ್ಗಿಯ ಜಿಲ್ಲೆಯಲ್ಲಿ ಕೂಡ ಅಂತಹ ಘಟನೆ ನಡೆದಿದ್ದು ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿ ಒಬ್ಬನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಬೀರನಹಳ್ಳಿ ಎಂಬ ಗ್ರಾಮದಲ್ಲಿ ನಡೆದಿದೆ.
ಹತ್ಯೆಯಾದ ಯುವಕನನ್ನು ಚಿಂಚೋಳಿ ತಾಲೂಕಿನ ಶಾಲೆ ಬೀರನಹಳ್ಳಿ ಗ್ರಾಮದ ರವಿಕುಮಾರ್ (26) ಎಂದು ತಿಳಿದುಬಂದಿದೆ.ಕೂಲಿ ಕೆಲಸ ಮಾಡುತ್ತಿದ್ದ ರವಿಕುಮಾರ್, ಭಾನುವಾರ ಗ್ರಾಮದಲ್ಲಿ ಲಾರಿಯಿಂದ ಪರ್ಸಿ ಇಳಿಸುವಾಗ ಮಧುಸೂದನ್ ಎಂಬವರು ಹಲ್ಲೆ ಮಾಡಿದ್ದರಿಂದ ತೀವ್ರವಾಗಿ ಅಸ್ವಸ್ಥರಾಗಿ ಮೃತಪಟ್ಟಿದ್ದಾರೆ ಎಂದು ಮೃತ ವ್ಯಕ್ತಿಯ ಪತ್ನಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಪ್ರಕರಣ ದಾಖಲಿಸಿಕೊಂಡ ಪೊಲೀಸತು ಇದೀಗ ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.